ಫ್ಯಾನ್ಸ್‌ಗೆ ಸಿಹಿಸುದ್ದಿ- ಹೊರಬಿತ್ತು ‘ಪುಷ್ಪ 2’ ಚಿತ್ರದ ಬಿಗ್ ಅಪ್‌ಡೇಟ್

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’  ಸಿನಿಮಾ ಬಗ್ಗೆ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ.

Oct 9, 2024 - 04:02
ಫ್ಯಾನ್ಸ್‌ಗೆ ಸಿಹಿಸುದ್ದಿ- ಹೊರಬಿತ್ತು ‘ಪುಷ್ಪ 2’ ಚಿತ್ರದ ಬಿಗ್ ಅಪ್‌ಡೇಟ್

ಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’  ಸಿನಿಮಾ ಬಗ್ಗೆ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ‘ಪುಷ್ಪ 2’ ಚಿತ್ರದ ಹೊಸ ಪೋಸ್ಟರ್‌ವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ.‘ಪುಷ್ಪ 2’ ಹೊಸ ಪೋಸ್ಟರ್‌ನಲ್ಲಿ ಅಲ್ಲು ಅರ್ಜುನ್  ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಫಸ್ಟ್‌ ಹಾಫ್‌ ಲಾಕ್‌ ಮತ್ತು ಲೋಡ್‌ ಫುಲ್‌ ಫೈರ್‌ ಎಂದು ಶೀರ್ಷಿಕೆ ನೀಡಿದ್ದಾರೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಂಡ ರಿವೀಲ್ ಮಾಡದೇ ಇದ್ದರೂ ಪೋಸ್ಟರ್ ಲುಕ್ ನೋಡಿ ಬನ್ನಿ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಇನ್ನೂ ಡಿಸೆಂಬರ್ 6ರಂದು ರಿಲೀಸ್ ಆಗುವ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ.

ಇನ್ನೂ ಡಿ.6ರಂದು ರಿಲೀಸ್ ಆಗಲಿದೆ ಎಂದು ದಿನಾಂಕವನ್ನು ಈ ಮೊದಲೇ ಘೋಷಿಸಿದ್ದರು. ಆದರೆ ಸುದೀರ್ಘವಾಗಿ ಶೂಟಿಂಗ್ ನಡೆಯುತ್ತಿದ್ದ ಕಾರಣ, ಈ ವರ್ಷದ ಅಂತ್ಯದಲ್ಲಿ ಸಿನಿಮಾ ಬಿಡುಗಡೆಯಾಗೋದು ಅನುಮಾನ ಎಂದು ಸುದ್ದಿ ಹರಿದಾಡುತ್ತಿತ್ತು. ಈಗ ಮತ್ತೊಮ್ಮೆ ರಿಲೀಸ್ ಕುರಿತು ಅಧಿಕೃತ ಅಪ್‌ಡೇಟ್ ಸಿಕ್ಕಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.