ಗೃಹಲಕ್ಷ್ಮಿ ಜಾರಿಯಾಗಿ 3 ವರ್ಷ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಜಿಲ್ಲಾಧಿಕಾರಿ ಕಚೇರಿ

Gruhalakshmi: ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ 3 ವರ್ಷಗಳು ಸಂದಿವೆ. ಈ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯು ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದೆ.

Aug 31, 2026 - 12:53
ಗೃಹಲಕ್ಷ್ಮಿ ಜಾರಿಯಾಗಿ 3 ವರ್ಷ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಜಿಲ್ಲಾಧಿಕಾರಿ ಕಚೇರಿ

ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ 'ಗೃಹ ಲಕ್ಷ್ಮಿ' ಜಾರಿಯಾಗಿ ಮೂರು ವರ್ಷಗಳು ಸಂದಿವೆ. ಇದರ ಸವಿನೆನಪಿಗಾಗಿ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಭಾನುವಾರ ರಾತ್ರಿ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿತು.

ಪ್ರತಿ ಮನೆಯ ಯಜಮಾನಿಗೆ ಮಾಸಿಕ ರೂ.2,000 ನೀಡುವುದರೊಂದಿಗೆ, ಮಹಿಳೆಯರು ಸ್ವಾವಲಂಬಿಜೀವನ ರೂಪಿಸಿಕೊಳ್ಳಲು ನೆರವಾಗಿರುವ 'ಗೃಹಲಕ್ಷ್ಮೀ' ಯೋಜನೆ ಜಾರಿಗೆ ಬಂದು ಆ.30ಕ್ಕೆ  ಮೂರು ವರ್ಷಗಳನ್ನು ಪೂರೈಸಿದೆ.


 ಇದುವರೆಗೂ ಗೃಹಲಕ್ಷ್ಮಿ ಯೋಜನೆ ಅಡಿ 1.20 ಕೋಟಿ ಫಲನುಭವಿಗಳ ಖಾತೆಗೆ ರೂ.76,500 ಕೋಟಿಗೂ ಹೆಚ್ಚು ಹಣ ಪಾವತಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ವಿದ್ಯದ್ದೀಪಾಲಂಕಾರವನ್ನು ಏರ್ಪಡಿಸಲಾಗಿತ್ತು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.