ಹನುಮಗಿರಿ: ಶೇಷನಾಗನಿಗೆ ವಿಜೃಂಭಣೆಯ ನಾಗತಂಬಿಲ - ಕ್ಷೀರಾಭಿಷೇಕ ಸೇವೆ

Naga Panchami: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹನುಮಗಿರಿಯಲ್ಲಿ ನಾಗರ ಪಂಚಮಿ ಪ್ರಯುಕ್ತ, ಶೇಷನಾಗನಿಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾ-ಭಕ್ತಿಯಿಂದ ನಡೆದವು.

Aug 17, 2026 - 17:44
ಹನುಮಗಿರಿ: ಶೇಷನಾಗನಿಗೆ ವಿಜೃಂಭಣೆಯ ನಾಗತಂಬಿಲ - ಕ್ಷೀರಾಭಿಷೇಕ ಸೇವೆ

ಪುತ್ತೂರು: ಇಲ್ಲಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹನುಮಗಿರಿಯಲ್ಲಿ ನಾಗರ ಪಂಚಮಿ ಪ್ರಯುಕ್ತ, ಶೇಷನಾಗನಿಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾ-ಭಕ್ತಿಯಿಂದ ನಡೆದವು.
 
ನಾಗರ ಪಂಚಮಿಯ ಶುಭ ಮುಹೂರ್ತದಲ್ಲಿ, ಶೇಷನಾಗನಿಗೆ ವಿಶೇಷ ನಾಗತಂಬಿಲ, ಸೀಯಾಳ ಅಭಿಷೇಕ ಮತ್ತು ಕ್ಷೀರಾಭಿಷೇಕ ಸೇವೆಗಳನ್ನು ನೆರವೇರಿಸಲಾಯಿತು. ಕ್ಷೇತ್ರದ ಅರ್ಚಕ ರಾಜೇಶ್ ಗಾಂವ್ಕರ್, ರವೀಶ್ ಭಟ್ & ಮಹೇಶ್ ಭಟ್ ಅವರ ದಿವ್ಯ ಸಾನ್ನಿಧ್ಯದಲ್ಲಿ ಶಾಸ್ತ್ರೋಕ್ತವಾಗಿ ಹಾಗೂ ವೈದಿಕ ವಿಧಿ-ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡವು.
ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಕ್ಷೇತ್ರದ ಧರ್ಮದರ್ಶಿ ಶಿವರಾಂ ಪಿ, ಕ್ಷೇತ್ರ ಸಂವರ್ಧನಾ ಸಮಿತಿಯ ಪ್ರಮುಖ ಸದಸ್ಯರು ಮತ್ತು ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.