ದೀಪಾವಳಿ ಹಬ್ಬಕ್ಕೆ ಹೋಗುವವರಿಗೆ ಖುಷಿ ಸುದ್ದಿ; ಬೆಂಗಳೂರಿನಿಂದ ಈ ಊರುಗಳಿಗೆ ವಿಶೇಷ ರೈಲು

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನಿಂದ ಹಲವೆಡೆ ವಿಶೇಷ ರೈಲುಗಳನ್ನು ಬಿಡಲು ತೀರ್ಮಾನಿಸಲಾಗಿದೆ.

Oct 22, 2024 - 11:49
ದೀಪಾವಳಿ ಹಬ್ಬಕ್ಕೆ ಹೋಗುವವರಿಗೆ ಖುಷಿ ಸುದ್ದಿ; ಬೆಂಗಳೂರಿನಿಂದ ಈ ಊರುಗಳಿಗೆ ವಿಶೇಷ ರೈಲು

ಹುಬ್ಬಳ್ಳಿ:  ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನಿಂದ ಹಲವೆಡೆ ವಿಶೇಷ ರೈಲುಗಳನ್ನು ಬಿಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ - ಕಾರವಾರ ಮತ್ತು ಯಶವಂತಪುರ - ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿಶೇಷ ರೈಲುಗಳ ವಿವರಗಳು ಈ ಕೆಳಗಿನಂತಿವೆ.ಸಮಯ- ರೈಲು ನಿಲ್ಲುವ ಸ್ಥಳ ಇಲ್ಲಿದೆ ರೈಲು ಸಂಖ್ಯೆ 06597 ಅಕ್ಟೋಬರ್ 30, 2024 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿರುವ ಈ ರೈಲು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು (06598) ಅಕ್ಟೋಬರ್ 31, 2024 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಡಲಿರುವ ರೈಲು ಅದೇ ಮಾರ್ಗವಾಗಿ, ಮರುದಿನ ಬೆಳಗಿನ ಜಾವ್ 4 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.ಈ ರೈಲಿನಲ್ಲಿ 4 ಜನರಲ್ ಸೆಕೆಂಡ್ ಕ್ಲಾಸ್, 10 ಸ್ಲೀಪರ್ ಕ್ಲಾಸ್, 2 ಎಸಿ ತ್ರಿ ಟೈಯರ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್‌ಗಳು ಸೇರಿದಂತೆ 18 ಬೋಗಿಗಳು ಇರಲಿವೆ.ರೈಲು ಸಂಖ್ಯೆ 06565 ಅಕ್ಟೋಬರ್ 30, 2024 ರಂದು ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಡಲಿರುವ ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.