ಅ.29 ರಿಂದ ಹಾಸನಾಂಬ ಉತ್ಸವ: ಸಿಎಂ, ಮಾಜಿ ಸಿಎಂಗೆ ಆಹ್ವಾನ

Hasanamba Festival: ಹಾಸನಾಂಬ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಸನ ಜಿಲ್ಲಾಡಳಿತ ವತಿಯಿಂದ ಆಹ್ವಾನಿಸಲಾಗಿದೆ.

Oct 24, 2026 - 13:18
Oct 24, 2026 - 13:18
ಅ.29 ರಿಂದ ಹಾಸನಾಂಬ ಉತ್ಸವ: ಸಿಎಂ, ಮಾಜಿ ಸಿಎಂಗೆ ಆಹ್ವಾನ

ಹಾಸನ: ಪ್ರಸಿದ್ಧ ಹಾಸನಾಂಬಾ ಜಾತ್ರಾ ಮಹೋತ್ಸವ-2026 ಅ.29 ರಿಂದ ನ.11 ರವರೆಗೆ ನಡೆಯಲಿದೆ. ಈ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಸನ ಜಿಲ್ಲಾಡಳಿತ ವತಿಯಿಂದ ಆಹ್ವಾನಿಸಲಾಗಿದೆ. 

ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ಐತಿಹಾಸಿಕ ಹಾಸನಾಂಬ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರ ನೇತೃತ್ವದ ನಿಯೋಗವು ನನ್ನನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿ, ಅಧಿಕೃತವಾಗಿ ಆಹ್ವಾನಿಸಿದರು ಎಂದು ಬರೆದುಕೊಂಡಿದ್ದಾರೆ. 

ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್'ನಲ್ಲಿ ಪೋಸ್ಟ್ ಮಾಡಿ, ಅಬಕಾರಿ ಸಚಿವರು, ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರು ಆದ ಕೆ.ಎಂ.ಶಿವಲಿಂಗೇಗೌಡ ಹಾಗೂ ಹಾಸನದ ಲೋಕಸಭೆ ಸದಸ್ಯ ಶ್ರೇಯಸ್ ಪಟೇಲ್, ಮೈಸೂರು ನಿವಾಸದಲ್ಲಿ ನನ್ನನ್ನು ಭೇಟಿಯಾಗಿ, ಹಾಸನಾಂಬಾ ದೇವಿಯ ಉತ್ಸವಕ್ಕೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು.
 
ಹಾಸನಾಂಬಾ ಉತ್ಸವವು ಅದ್ಧೂರಿಯಾಗಿ ಮತ್ತು ಅಷ್ಟೇ ಅರ್ಥಪೂರ್ಣವಾಗಿ ಸಂಪನ್ನಗೊಳಲಿ, ಉತ್ಸವಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ದೇವಿ ಒಳಿತನ್ನು ಮಾಡಲಿ ಎಂದು ಶುಭ ಕೋರಿ, ಆಹ್ವಾನಿಸಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದೆ ಎಂದು ಹೇಳಿದ್ದಾರೆ. 

ಅ.29 ಗುರುವಾರದಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇಗುಲದ ಗರ್ಭಗುಡಿ ಬಾಗಿಲನ್ನು ತೆರೆಯಲಾಗುತ್ತದೆ. ಅ.30 ರಿಂದ ನ.10 ರವರೆಗೆ 12 ದಿನಗಳ ಕಾಲ, ಭಕ್ತರಿಗೆ ದರ್ಶನಕ್ಕೆ ಅವಕಾಶವಿರಲಿದೆ. 

ನ.11 ರಂದು ಪೂಜಾ ವಿಧಿವಿಧಾನಗಳೊಂದಿಗೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.