'ಕೆಂಪುಕೋಟೆಯ ಮೇಲೆ ಮುತ್ತು ಚಲ್ಲಿತ್ತಲೇ ಪರಾಕ್!'

Devaragudda Karnikotsava: ದೇವರಗುಡ್ಡದ 'ಮಾಲತೇಶಸ್ವಾಮಿ' ಸನ್ನಿಧಿಯಲ್ಲಿ ಸೋಮವಾರ ಸಂಜೆ 6 ಗಂಟೆಗೆ ಕಾರ್ಣಿಕೋತ್ಸವ ಜರುಗಿತು.

Oct 20, 2026 - 10:43
Oct 20, 2026 - 10:45
'ಕೆಂಪುಕೋಟೆಯ ಮೇಲೆ ಮುತ್ತು ಚಲ್ಲಿತ್ತಲೇ ಪರಾಕ್!'

ಹಾವೇರಿ: ರಾಣೇಬೆನ್ನೂರು ತಾಲೂಕಿನ ಪ್ರಸಿದ್ಧ ಕ್ಷೇತ್ರ ದೇವರಗುಡ್ಡದ 'ಮಾಲತೇಶಸ್ವಾಮಿ' ಸನ್ನಿಧಿಯಲ್ಲಿ ಸೋಮವಾರ ಸಂಜೆ 6 ಗಂಟೆಗೆ ಕಾರ್ಣಿಕೋತ್ಸವ ಜರುಗಿತು. 'ಕೆಂಪುಕೋಟೆಯ ಮೇಲೆ ಮುತ್ತು ಚಲ್ಲಿತ್ತಲೇ ಪರಾಕ್!' ಎಂದು ಈ ವರ್ಷದ ದೈವವಾಣಿ ಹೊರಬಿದ್ದಿದೆ. 

ಸತತ 9 ದಿನಗಳ ಕಾಲ ಉಪವಾಸ ವ್ರತ ಕೈಗೊಂಡು ಗೊರವಯ್ಯ ನಾಗಪ್ಪಜ್ಜ ಉರ್ಮಿ, 15 ಅಡಿ ಬಿಲ್ಲನ್ನೇರಿ ಈ ಬಾರಿಯ ಕಾರ್ಣಿಕ ನುಡಿದಿದ್ದಾರೆ. 

ಮುಂಗಾರು ಮಳೆಯಿಂದ ಕಂಗಾಲಾಗಿದ್ದ ರೈತರಿಗೆ, ಈ ನುಡಿಯು ಹಿಂಗಾರು ಮಳೆಯಿಂದ ಸಮೃದ್ಧಯಾಗಿ ಬೆಳೆಯಾಗಲಿದೆ ಎಂಬ ಭರವಸೆ ನೀಡಿದೆ. ರಾಜಕೀಯವಾಗಿ ಆಡಳಿತ ಚುಕ್ಕಾಣಿ ಹಿಡಿದಿರುವ ಕೇಂದ್ರ ವ್ಯವಸ್ಥೆಯಲ್ಲಿ ಸ್ಥಿರತೆ ಉಂಟಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಕಾರ್ಣಿಕೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.