Hero Splendor: ನಂ.1 ಹೀರೋ ಸ್ಪ್ಲೆಂಡರ್ ಬೈಕ್‌ಗೆ ಫುಲ್ ಡಿಮ್ಯಾಂಡ್.. ಕ್ಯೂ ನಿಂತ ಜನ!

Hero Splendor: ಈ 2026ರ ಆಗಸ್ಟ್ ತಿಂಗಳಲ್ಲಿಯೂ 'ಹೀರೋ ಸ್ಪ್ಲೆಂಡರ್' ಬೈಕ್ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Sep 29, 2026 - 15:00
Hero Splendor: ನಂ.1 ಹೀರೋ ಸ್ಪ್ಲೆಂಡರ್ ಬೈಕ್‌ಗೆ ಫುಲ್ ಡಿಮ್ಯಾಂಡ್.. ಕ್ಯೂ ನಿಂತ ಜನ!

Hero Splendor: ಹೀರೋ ಸ್ಪ್ಲೆಂಡರ್  ನಂಬರ್ 1 ಬೈಕ್ ಆಗಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. 2026ರ ಆಗಸ್ಟ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3,53,842 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 3,11,698 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ +13.52% ಬೆಳವಣಿಗೆಯಾಗಿದೆ.

ನೂತನ 'ಹೀರೋ ಸ್ಪ್ಲೆಂಡರ್' 3 ವಿಧದಲ್ಲಿ ಖರೀದಿದಾರರಿಗೆ ಲಭ್ಯವಿದೆ. ಅವುಗಳೆಂದರೆ, ಸ್ಪ್ಲೆಂಡರ್ ಪ್ಲಸ್, ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಮತ್ತು ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಎಂದು. 

ಹೀರೋ ಸ್ಪ್ಲೆಂಡರ್ ಪ್ಲಸ್:

ಇದು ಅಗ್ಗದ ದರದಲ್ಲಿ ಲಭ್ಯವಿದೆ. ರೂ.77,777 ರಿಂದ ರೂ.80,531 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 97.2-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 

ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಐ3ಎಸ್ ಟೆಕ್ನಾಲಜಿ ಸೇರಿದಂತೆ ನಾನಾ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. 

ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್:

ಈ ಬೈಕ್ ಸ್ವಲ್ಪ ಪ್ರೀಮಿಯಂ ಆಗಿದ್ದು, ರೂ.81,283 ರಿಂದ ರೂ.84,326 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 70 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 

ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್: 

ಇದು ಸ್ಟೈಲಿಶ್ ಬೈಕ್ ಎಂದು ಹೆಸರುವಾಸಿಯಾಗಿದೆ. ರೂ.86,218 ರಿಂದ ರೂ.82,530 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 69 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 

ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಎಂಜಿನ್ ಕಿಲ್ ಸ್ವೀಚ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.