ಕರಾವಳಿ ಭಾಗದಲ್ಲಿ ಹೈಕೋರ್ಟ್‌ ಪೀಠ: ಪರಿಶೀಲನೆಗೆ ಸಮಿತಿ

High Court Bench in Coastal Region: ಕರ್ನಾಟಕದ ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪನೆ ಸಂಬಂಧ ಪರಿಶೀಲನೆಗೆ ಮೂವರು ಹೈಕೋರ್ಟ್‌ ನ್ಯಾಯಮೂರ್ತಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ.

Sep 30, 2026 - 09:27
Sep 30, 2026 - 10:12
ಕರಾವಳಿ ಭಾಗದಲ್ಲಿ ಹೈಕೋರ್ಟ್‌ ಪೀಠ: ಪರಿಶೀಲನೆಗೆ ಸಮಿತಿ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪನೆ ಸಂಬಂಧ ಪರಿಶೀಲನೆಗೆ ಮೂವರು ಹೈಕೋರ್ಟ್‌ ನ್ಯಾಯಮೂರ್ತಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಆದೇಶದಂತೆ ಮೂವರು ಸದಸ್ಯರ ಸಮಿತಿ ರಚಿಸಿ, ರಿಜಿಸ್ಟ್ರಾರ್‌ ಜನರಲ್‌ ಅಧಿಸೂಚನೆ ಹೊರಡಿಸಿದ್ದಾರೆ. ಸಮಿತಿಯಲ್ಲಿ ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್‌, ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ಹಾಗೂ ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಸಮಿತಿಯು ಮಂಗಳೂರು/ ಉಡುಪಿ, ಶಿವಮೊಗ್ಗ-ಚಿಕ್ಕಮಗಳೂರು, ಕೊಡಗು-ಮಡಿಕೇರಿ, ಹಾಸನ, ದಾವಣಗೆರೆ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವಕೀಲರ ಸಂಘಗಳು, ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ. ಈ ಭಾಗದಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯ ಕಾರ್ಯಸಾಧ್ಯತೆ ಕುರಿತು ವರದಿ ಸಲ್ಲಿಕೆ ಮಾಡಲಿದೆ. 

ಪ್ರಸ್ತುತ ರಾಜ್ಯದಲ್ಲಿ ಬೆಂಗಳೂರಿನ ಪ್ರಧಾನ ಪೀಠದೊಂದಿಗೆ, ಧಾರವಾಡ ಹಾಗೂ ಕಲಬುರಗಿ ಪೀಠಗಳು ಕಾರ್ಯನಿರ್ವಹಿಸುತ್ತಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.