Honda Activa: ಇದೇ ನಂ.1 'ಹೋಂಡಾ ಆಕ್ಟಿವಾ'ದ ಪವರ್.. ಭಾರೀ ಬೇಡಿಕೆ, ಮುಗಿಬಿದ್ದ ಗ್ರಾಹಕರು!

Honda Activa: ಈ 2026ರ ಸೆಪ್ಟೆಂಬರ್ ತಿಂಗಳಲ್ಲೂ 'ಹೋಂಡಾ ಆಕ್ಟಿವಾ' ಸ್ಕೂಟರ್ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Oct 20, 2026 - 21:12
Honda Activa: ಇದೇ ನಂ.1 'ಹೋಂಡಾ ಆಕ್ಟಿವಾ'ದ ಪವರ್.. ಭಾರೀ ಬೇಡಿಕೆ, ಮುಗಿಬಿದ್ದ ಗ್ರಾಹಕರು!

Honda Activa: ಹೋಂಡಾ ಆಕ್ಟಿವಾ (Honda Activa) ನಂಬರ್ 1 ಸ್ಕೂಟರ್ ಆಗಿದೆ. ಇದಕ್ಕೆ ಗ್ರಾಹಕರು ಕೂಡ ಮನಸೋತ್ತಿದ್ದಾರೆ. ಈ 2026ರ ಸೆಪ್ಟೆಂಬರ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3,52,271 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 2,37,716 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 48.19% ಬೆಳವಣಿಗೆಯಾಗಿದೆ. 

'ಹೋಂಡಾ ಆಕ್ಟಿವಾ' ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಅವುಗಳೆಂದರೆ, ಹೋಂಡಾ ಆಕ್ಟಿವಾ 110 ಹಾಗೂ ಹೋಂಡಾ ಆಕ್ಟಿವಾ 125 ಎಂದು.

ಹೋಂಡಾ ಆಕ್ಟಿವಾ 110 (Honda Activa 110):

ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.75,433 ರಿಂದ ರೂ.93,260 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಡೀಸೆಂಟ್ ಬ್ಲೂ ಮೆಟಾಲಿಕ್, ಪರ್ಲ್ ಪ್ರೆಷಿಯಸ್ ವೈಟ್ & ರೆಬೆಲ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 

ಈ ಸ್ಕೂಟರ್ 109-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 50 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ & ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. 

ಹೋಂಡಾ ಆಕ್ಟಿವಾ 125 (Honda Activa 125):

ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ದೊರೆಯುತ್ತದೆ. ರೂ.93,067 ರಿಂದ ರೂ.99,133 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ ಮತ್ತು ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 

ಈ ಸ್ಕೂಟರ್ 123-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 47 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಕನ್ಸೋಲ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. 

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.