Honda Amaze: 19.46 ಕಿ.ಮೀ ಮೈಲೇಜ್.. 5-ಸೀಟರ್.. ಹೋಂಡಾ ಅಮೇಜ್ ಕಾರಿಗೆ ಮನಸೋತ ಜನ!

Honda Amaze: 'ಹೋಂಡಾ ಅಮೇಜ್' ಈ ಆಗಸ್ಟ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Sep 14, 2026 - 14:48
Honda Amaze: 19.46 ಕಿ.ಮೀ ಮೈಲೇಜ್.. 5-ಸೀಟರ್.. ಹೋಂಡಾ ಅಮೇಜ್ ಕಾರಿಗೆ ಮನಸೋತ ಜನ!

Honda Amaze: 'ಹೋಂಡಾ ಅಮೇಜ್' ಪ್ರಮುಖ ಸೆಡಾನ್ ಆಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಈ ಆಗಸ್ಟ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3,512 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,753 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ +100.3% ಪ್ರಗತಿಯಾಗಿದೆ. 

ಇದು ರೂ.7.65 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ವಿ, ವಿಎಕ್ಸ್ ಮತ್ತು ಜಡ್ಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. 

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ರೇಡಿಯಂಟ್ ರೆಡ್ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್ ಹಾಗೂ ಮೆಟಿರಾಯ್ಡ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 

ನೂತನ 'ಅಮೇಜ್'ನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 416 ಲೀ.ನಷ್ಟು  ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 

ಇದು 1.2-ಲೀ. ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುಯಲ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 19.46 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, 6-ಸ್ಪೀಕರ್ ಸೌಂಡ್ ಸಿಸ್ಟಮ್ & ಪ್ಯಾಡಲ್ ಶಿಫ್ಟರ್‌ಗಳು ಸೇರಿದಂತೆ ನಾನಾ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ 'ಅಮೇಜ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ, 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ತನ್ನದಾಗಿಸಿಕೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.