Honda QC1: ಬರೀ 90,708 ರೂ.. 80 Km ರೇಂಜ್.. ಹೋಂಡಾ ಕ್ಯೂಸಿ1ಗೆ ಮನಸೋತ ಜನ!

Honda QC1: ಈ 2026ರ ಆಗಸ್ಟ್ ತಿಂಗಳಲ್ಲಿ 'ಹೋಂಡಾ ಕ್ಯೂಸಿ1' ಎಲೆಕ್ಟ್ರಿಕ್ ಸ್ಕೂಟರ್ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Sep 27, 2026 - 18:52
Honda QC1: ಬರೀ 90,708 ರೂ.. 80 Km ರೇಂಜ್.. ಹೋಂಡಾ ಕ್ಯೂಸಿ1ಗೆ ಮನಸೋತ ಜನ!

Honda QC1: ಹೋಂಡಾ ಕ್ಯೂಸಿ1 ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಈ 2026ರ ಆಗಸ್ಟ್ ತಿಂಗಳಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 1,901 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,160 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 63.88% ಪ್ರಗತಿಯಾಗಿದೆ. 

ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.90,708 (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು.  

ಈ ಸ್ಕೂಟರ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ, ಹೆಡ್‌ಲೈಟ್, ಇಂಡಿಕೇಟರ್‌ಗಳು, ಟೈಲ್ ಲೈಟ್‌, ಸಿಂಗಲ್ - ಪೀಸ್ ಗ್ರಾಬ್ ಹ್ಯಾಂಡಲ್ ಹಾಗೂ 12-ಇಂಚಿನ ಅಲಾಯ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪರ್ಲ್ ಸೆರೆನಿಟಿ ಬ್ಲೂ, ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್, ಪರ್ಲ್ ಮಿಸ್ಟಿ ವೈಟ್, & ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.   169 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,275 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 

ನೂತನ 'ಕ್ಯೂಸಿ1' ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಿಂಗಲ್ ಚಾರ್ಜ್‌ನಲ್ಲಿ 80 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.  ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 

ಇದು 5-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ, ಯುಎಸ್‌ಬಿ-ಸಿ ಚಾರ್ಜಿಂಗ್ ಪಾಯಿಂಟ್ ಹಾಗೂ ಅನಲಾಗ್ ಕೀಯನ್ನು ಪಡೆದಿದೆ. ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಡ್ರಮ್ ಬ್ರೇಕ್‌ಗಳನ್ನುಪಡೆದಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.