Honda Unicorn: ಹೋಂಡಾ ಯುನಿಕಾರ್ನ್ ಬೈಕ್‌ಗೆ ಮನಸೋತ ಜನ.. 60 Km ಮೈಲೇಜ್.. ರೂ.1.15 ಲಕ್ಷ ರೂ!
Honda Unicorn: ಹೋಂಡಾ ಯುನಿಕಾರ್ನ್ ಜನಪ್ರಿಯ ಬೈಕ್ ಆಗಿದ್ದು, ಈ 2026ರ ಜುಲೈ ತಿಂಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.
ಹೋಂಡಾ ಯುನಿಕಾರ್ನ್ (Honda Unicorn) ಜನಪ್ರಿಯ ಬೈಕ್ ಆಗಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಜುಲೈ ತಿಂಗಳಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. 35,007 ಯುನಿಟ್‍ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 30,572 ಯುನಿಟ್‍ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 14.51% ಪ್ರಗತಿಯಾಗಿದೆ.
'ಹೋಂಡಾ ಯುನಿಕಾರ್ನ್' ವಿಶೇಷತೆಗಳೇನು:
ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.1,15,231 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಪ್ರೀಮಿಯಂ 3ಡಿ 'ಹೋಂಡಾ' ಲೋಗೋ, ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಯ್ಲಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಹಾಗೂ ರೇಡಿಯಂಟ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಈ ಮೋಟಾರ್‌ಸೈಕಲ್, ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 162.71-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 13.18 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 14.58 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 50 ರಿಂದ 60 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 106 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಹೊಸ 'ಯುನಿಕಾರ್ನ್' ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಸೇರಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 17-ಇಂಚಿನ ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. 187 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,335 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.