IBPS: 11,403 ಹುದ್ದೆ.. ಡಿಗ್ರಿ ಮುಗಿಸಿದ್ರೆ ಸಾಕು.. ನಾಡಿದ್ದು ಕಡೆ ದಿನ

IBPS: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್, 11,403 ಕಸ್ಟಮರ್ ಸರ್ವಿಸ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ನಾಡಿದ್ದು ಅಂದರೆ ಆ.21ಕ್ಕೆ ಕೊನೆ ದಿನಕವಾಗಿದೆ.

Aug 19, 2026 - 16:30
IBPS: 11,403 ಹುದ್ದೆ.. ಡಿಗ್ರಿ ಮುಗಿಸಿದ್ರೆ ಸಾಕು.. ನಾಡಿದ್ದು ಕಡೆ ದಿನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS), ಬೃಹತ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. 11,403 ಕಸ್ಟಮರ್ ಸರ್ವಿಸ್ ಅಸೋಸಿಯೇಟ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ತುಂಬಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಡಿದ್ದು ಅಂದರೆ ಆ.21ಕ್ಕೆ ಕೊನೆ ದಿನಕವಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ 'ಪದವಿ' ಪಾಸ್ ಆದವರು ಅರ್ಜಿ ಹಾಕಬಹುದು. 

ವಯೋಮಿತಿ: ಕನಿಷ್ಠ 20 ಮತ್ತು 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ನಿಯಮಾನುಸಾರ ಒಬಿಸಿಯವರಿಗೆ 3 ವರ್ಷ & ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ. 

ಸಂಬಳ: ಆಯ್ಕೆಯಾದವರಿಗೆ ಮಾಸಿಕ ರೂ.64,480 ವರೆಗೆ ವೇತನವಿದೆ.

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿಯವರಿಗೆ ರೂ.850 ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.175 ಶುಲ್ಕವಿದೆ. ಹೆಚ್ಚಿನ ಮಾಹಿತಿಗೆ https://www.ibps.in/ನ್ನು ಸಂಪರ್ಕಿಸಿರಿ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.