IBPS: 11,403 ಹುದ್ದೆಗೆ ಅರ್ಜಿ.. ಡಿಗ್ರಿ ಆಗಿದ್ರೆ ಸಾಕು!
IBPS: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್, ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕ್ಲರ್ಕ್ ನೇಮಕಾತಿ-2026ಕ್ಕೆ ಅಧಿಸೂಚನೆ ಹೊರಡಿಸಿದೆ.
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS), ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕ್ಲರ್ಕ್ ನೇಮಕಾತಿ-2026ಕ್ಕೆ ಅಧಿಸೂಚನೆ ಹೊರಡಿಸಿದೆ. 11,403 ಕಸ್ಟಮರ್ ಸರ್ವಿಸ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 'ಪದವಿ' ಶಿಕ್ಷಣ ಪೂರೈಸಿರಬೇಕು.
ವಯೋಮಿತಿ: ಕನಿಷ್ಠ 20 ಹಾಗೂ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ಒಬಿಸಿಯವರಿಗೆ 3 ವರ್ಷ & ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆಯಿದೆ.
ವೇತನ: ಆಯ್ಕೆಯಾದವರಿಗೆ ತಿಂಗಳಿಗೆ ರೂ.64,480 ವರೆಗೆ ಸಂಬಳ ಲಭ್ಯವಾಗುತ್ತದೆ.
ಎಲ್ಲಿ ಉದ್ಯೋಗ: ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಯುಕೋ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ ಇಂಡಿಯನ್ ಬ್ಯಾಂಕ್ ಮತ್ತು ಪಂಜಾಬ್ & ಸಿಂಧ್ ಬ್ಯಾಂಕ್‌ಗಳಿಗೆ ಅಭ್ಯರ್ಥಿಗಳನ್ನು ನೇಮಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಕಡೆ ದಿನ/ ಶುಲ್ಕ: ಆಗಸ್ಟ್ 21ಕ್ಕೆ ಕೊನೆಯಾಗಲಿದ್ದು, ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.850 ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.175 ಶುಲ್ಕವಿದೆ.
ಹೆಚ್ಚಿನ ಮಾಹಿತಿಗೆ https://www.ibps.in/ನ್ನು ಸಂಪರ್ಕಿಸಿರಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.