IBPS: ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ.. 6,715 ಹುದ್ದೆಗೆ ಅರ್ಜಿ

IBPS PO Recruitment 2026: Total Vacancies: 6,715 Details: ಬ್ಯಾಂಕಿಂಗ್ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಐಬಿಪಿಎಸ್ ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಪ್ರೊಬೇಷನರಿ ಆಫೀಸರ್/ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

Jul 2, 2026 - 17:14
Jul 2, 2026 - 18:03
IBPS: ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ.. 6,715 ಹುದ್ದೆಗೆ ಅರ್ಜಿ

ಬೆಂಗಳೂರು: ಬ್ಯಾಂಕಿಂಗ್ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS), ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಪ್ರೊಬೇಷನರಿ ಆಫೀಸರ್/ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. 

ಒಟ್ಟು 6,715 ಹುದ್ದೆಗಳನ್ನು ತುಂಬಲಾಗುತ್ತದೆ. ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್, ಯುಕೋ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯಯಲ್ಲಿ 'ಪದವಿ' ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ & ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆಯಿದೆ.

ಪ್ರೊಬೇಷನರಿ ಆಫೀಸರ್/ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗೆ ಆಯ್ಕೆಯಾದವರಿಗೆ ತಿಂಗಳಿಗೆ ರೂ.48,480 ರಿಂದ ರೂ.85,920 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜುಲೈ 21 ಕಡೆ ದಿನವಾಗಿದೆ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ ರೂ.175 ಮತ್ತು ಇತರರಿಗೆ ರೂ.850 ಶುಲ್ಕವಿದೆ. ಹೆಚ್ಚಿನ ಮಾಹಿತಿಗೆ https://www.ibps.in/ಗೆ ಸಂಪರ್ಕಿಸಬಹುದು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.