IBPS: 6,715 ಪ್ರೊಬೇಷನರಿ ಆಫೀಸರ್ ಹುದ್ದೆ.. ನಾಳೆಯೇ ಕಡೆ ದಿನ

IBPS: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್, ಪ್ರೊಬೇಷನರಿ ಆಫೀಸರ್/ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 6,715 ಹುದ್ದೆಗಳನ್ನು ತುಂಬಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕಡೆ ದಿನವಾಗಿದೆ.

Jul 20, 2026 - 14:58
Jul 20, 2026 - 14:58
IBPS: 6,715 ಪ್ರೊಬೇಷನರಿ ಆಫೀಸರ್ ಹುದ್ದೆ.. ನಾಳೆಯೇ ಕಡೆ ದಿನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS), ಪ್ರೊಬೇಷನರಿ ಆಫೀಸರ್/ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು  6,715 ಹುದ್ದೆಗಳನ್ನು ತುಂಬಲಾಗುತ್ತದೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ (ಜುಲೈ 21) ಕಡೆ ದಿನವಾಗಿದೆ. ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್, ಯುಕೋ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯಯಲ್ಲಿ 'ಪದವಿ' ಉತ್ತೀರ್ಣರಾದವರು ಅರ್ಜಿ ಸಲ್ಲಿಕೆ ಮಾಡಬಹುದು. ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಲಾಗಿದೆ. ನಿಯಮಾನುಸಾರ ಸಡಿಲಿಕೆಯನ್ನು ನೀಡಲಾಗಿದೆ. 

 ಆಯ್ಕೆಯಾದವರಿಗೆ ಮಾಸಿಕ ರೂ.48,480 ರಿಂದ ರೂ.85,920 ವೇತನವನ್ನು ಕೊಡಲಾಗುತ್ತದೆ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ ರೂ.175 ಮತ್ತು ಇತರರಿಗೆ ರೂ.850 ಅರ್ಜಿ ಶುಲ್ಕವಿದೆ. 

ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗೂ ನಾಳೆಯೇ ಕಡೆ ದಿನ:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS), ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿಗೂ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆಗೆ ನಾಳೆ ಕೊನೆ ದಿನವಾಗಿದೆ. ಒಟ್ಟು 745  ಹುದ್ದೆಗಳು ಖಾಲಿಯಿದ್ದು, ಸಂಬಂಧಪಟ್ಟ ವಿಷಯಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. 

ಹೆಚ್ಚಿನ ಮಾಹಿತಿಗೆ https://www.ibps.in/ ಗೆ ಸಂಪರ್ಕಿಸಬಹುದು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.