IBPS: 745 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ.. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

IBPS Specialist Officer Recruitment 2026: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 'ಸ್ಪೆಷಲಿಸ್ಟ್ ಆಫೀಸರ್' ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿಯಿದ್ದು, ಜುಲೈ 21 ಕಡೆ ದಿನವಾಗಿದೆ.

Jul 15, 2026 - 18:23
IBPS: 745 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ.. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

ಬೆಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 'ಸ್ಪೆಷಲಿಸ್ಟ್ ಆಫೀಸರ್' ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 745  ಹುದ್ದೆಗಳನ್ನು ತುಂಬಲಾಗುತ್ತದೆ. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿಯಿದ್ದು, ಜುಲೈ 21 ಕಡೆ ದಿನವಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ 'ಐಬಿಪಿಎಸ್' ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಲಿದೆ. ಸಂಬಂಧಪಟ್ಟ ವಿಷಯಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಹಾಕಬಹುದು.

ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆಯಿದೆ.

ಆಯ್ಕೆಯಾದವರಿಗೆ ತಿಂಗಳಿಗೆ ರೂ.48,480 ರಿಂದ ರೂ.85,920 ವೇತನ ನೀಡಲಾಗುತ್ತದೆ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ ರೂ.175 ಮತ್ತು ಇತರರಿಗೆ ರೂ.850 ಅರ್ಜಿ ಶುಲ್ಕವಿದೆ.

ಹೆಚ್ಚಿನ ಮಾಹಿತಿಗೆ https://www.ibps.in/ಗೆ ಸಂಪರ್ಕಿಸಬಹುದು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.