ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ವಿರೋಧಿಸಲು INDIA ಒಕ್ಕೂಟ ನಿರ್ಧಾರ

INDIA Alliance: ಕ್ಷೇತ್ರ ಪುನರ್‌ವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಜಂಟಿಯಾಗಿ ವಿರೋಧಿಸಲು ಇಂಡಿ ಒಕ್ಕೂಟದ ನಾಯಕರು ನಿರ್ಧರಿಸಿದ್ದಾರೆ.

Nov 28, 2026 - 17:51
Nov 28, 2026 - 17:51
ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ವಿರೋಧಿಸಲು INDIA ಒಕ್ಕೂಟ ನಿರ್ಧಾರ

ನವದೆಹಲಿ: ಕ್ಷೇತ್ರ ಪುನರ್‌ವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಜಂಟಿಯಾಗಿ ವಿರೋಧಿಸಲು ಇಂಡಿ (INDIA) ಒಕ್ಕೂಟದ ನಾಯಕರು ನಿರ್ಧರಿಸಿದ್ದಾರೆ. 

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಮಸೂದೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಸ್ಥಾನಗಳು ದೊರೆಯುವುದಿಲ್ಲ. ಇದು ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡಲಿದೆ ಎಂದು ಆರೋಪಿಸಿದರು. 

ಮಸೂದೆಯನ್ನು ಅಧಿಕಾರದಲ್ಲಿ ಶಾಶ್ವತವಾಗಿ ಉಳಿಯಲು ಬಿಜೆಪಿ-ಆರ್‌ಎಸ್‌ಎಸ್ ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿದೆ. ಸಂವಿಧಾನವನ್ನೇ ಬದಲಿಸುವ ಉದ್ದೇಶ ಇದರ ಹಿಂದಿದೆ. ಹೀಗಾಗಿ ಮಸೂದೆಯನ್ನು ವಿರೋಧಿಸುವುದಾಗಿ ಖರ್ಗೆ ತಿಳಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.