'ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್-2026' ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ
India International Challenge 2026: ಬೆಂಗಳೂರಿನಲ್ಲಿ ಇಂದು 'ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್–2026' ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ, ಇಂದು 'ಬ್ಯಾಡ್ಮಿಂಟನ್ ಅಸೋಸಿಯೇಷನ್' ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ 'ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್-2026' ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಚಾಲನೆ ನೀಡಿದರು.
ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಕೆ.ಗೋವಿಂದರಾಜ್, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ, ಕಾರ್ಯದರ್ಶಿ ಮುರಳೀಧರ್ ಹಾಗೂ ಬ್ಯಾಡ್ಮಿಂಟನ್ ಡೆವಲಪ್‌ಮೆಂಟ್ ಕಮಿಟಿ ಅಧ್ಯಕ್ಷ ಗುರುಪ್ರಸಾದ್ ಇತರರು ಉಪಸ್ಥಿತರಿದ್ದರು.