IND vs NL: ನಾಳೆ ಅಂತಿಮ ಪಂದ್ಯ.. ಯಾರಿಗೆ ಗೆಲುವು?

IND vs NL: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 5ನೇ ಏಕದಿನ ಪಂದ್ಯವು ನಾಳೆ (ನ.15) ನ್ಯೂಜಿಲೆಂಡ್‌ನ ಮೌಂಟ್ ಮೌಂಗನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

Nov 14, 2026 - 13:30
Nov 14, 2026 - 13:35
IND vs NL: ನಾಳೆ ಅಂತಿಮ ಪಂದ್ಯ.. ಯಾರಿಗೆ ಗೆಲುವು?

IND vs NL: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 5ನೇ ಏಕದಿನ ಪಂದ್ಯವು ನಾಳೆ (ನ.15) ನ್ಯೂಜಿಲೆಂಡ್‌ನ ಮೌಂಟ್ ಮೌಂಗನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 7:30ಕ್ಕೆ ಶುರುವಾಗಲಿದೆ. 

ಸದ್ಯ 5 ಪಂದ್ಯಗಳ ಈ ಸರಣಿಯಲ್ಲಿ ಭಾರತವು 2-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಮಳೆಯಿಂದಾಗಿ 1 ಪಂದ್ಯ ರದ್ದಾಗಿತ್ತು. 

ನಿನ್ನೆ (ಶುಕ್ರವಾರ) ಜರುಗಿದ ನಾಲ್ಕನೇ ಏಕದಿನ ಪಂದ್ಯದಲ್ಲಿ, ನ್ಯೂಜಿಲೆಂಡ್ ವಿರುದ್ಧ ಭಾರತವು 244 ರನ್‌ಗಳ ಬೃಹತ್ ಅಂತರದಿಂದ ಸೋತಿದೆ.  

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ನಿಗದಿತ  50 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಕಳೆದುಕೊಂಡು 333 ರನ್ ಪೇರಿಸಿತು. ಈ ಬೃಹತ್ ಗುರಿ ಬೆನ್ನಟ್ಟಿದ ಭಾರತ, 26.4 ಓವರ್‌ಗಳಿಗೆ ಕೇವಲ 89 ರನ್ ಗಳಿಸಿ ಆಲ್ ಔಟ್ ಆಗಿತ್ತು

ಸಂಭಾವ್ಯ ಪ್ಲೇಯಿಂಗ್ 11:

ಭಾರತ: ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ನಮನ್ ಧೀರ್/ ತಿಲಕ್ ವರ್ಮಾ, ಅಕ್ಷರ್ ಪಟೇಲ್, ಅಕೀಬ್ ನಬಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಹಾಗೂ ಅರ್ಷ್‌ದೀಪ್ ಸಿಂಗ್.

ನ್ಯೂಜಿಲೆಂಡ್‌: ವಿಲ್ ಯಂಗ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ನಿಕ್ ಕೆಲ್ಲಿ, ಡೀನ್ ಫಾಕ್ಸ್‌ಕ್ರಾಫ್ಟ್/ ಮಿಚ್ ಹೇಯ್, ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕ್ರಿಸ್ಟಿಯನ್ ಕ್ಲಾರ್ಕ್/ ಜೋಶ್ ಕ್ಲಾರ್ಕ್‌ಸನ್, ಮ್ಯಾಟ್ ಫಿಶರ್, ಜೇಕಬ್ ಡಫಿ ಮತ್ತು ಬ್ಲೇರ್ ಟಿಕ್ನರ್/ ಬ್ರೆಟ್ ರ‍್ಯಾಂಡೆಲ್.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.