IND vs NL: ನಾಳೆ ಮೊದಲ ಏಕದಿನ ಪಂದ್ಯ.. ಯಾರಿಗೆ ಗೆಲುವು?
IND vs NL: ಭಾರತ ಮತ್ತು ನ್ಯೂಜಿಲೆಂಡ್ ನಡುವೆ 5 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಾಳೆ (ನ.4) ನಡೆಯಲಿದೆ.
IND vs NL: ಭಾರತ ಮತ್ತು ನ್ಯೂಜಿಲೆಂಡ್ ನಡುವೆ 5 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಾಳೆ (ನ.4) ನಡೆಯಲಿದೆ. ನ್ಯೂಜಿಲೆಂಡ್'ನ ಆಕ್ಲೆಂಡ್ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ಈ ಪಂದ್ಯವು ಜರುಗಲಿದ್ದು, ಬೆಳಗ್ಗೆ 7:30ಕ್ಕೆ (ಭಾರತೀಯ ಕಾಲಮಾನ) ಶುರುವಾಗಲಿದೆ.
ಈ ಏಕದಿನ ಸರಣಿಯ ಮೊದಲ 3 ಪಂದ್ಯಗಳಿಗೆ ಶುಭ್‌ಮನ್ ಗಿಲ್ ನಾಯಕತ್ವ ವಹಿಸಿದ್ದಾರೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಟಿ20 ಸರಣಿಯನ್ನು ಭಾರತವು 3-2 ರಿಂದ ಗೆದ್ದುಕೊಂಡಿದೆ.
ಸಂಭಾವ್ಯ ಪ್ಲೇಯಿಂಗ್ 11:
ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ನಮನ್ ಧೀರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಹಾಗೂ ಕುಲದೀಪ್ ಯಾದವ್/ ಜುರ್ನೂರ್ ಬ್ರಾರ್.
ನ್ಯೂಜಿಲೆಂಡ್: ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರೆಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಜೇಕಬ್ ಡಫಿ, ನಾಥನ್ ಸ್ಮಿತ್ ಮತ್ತು ಕೈಲ್ ಜೇಮಿಸನ್.