India Post: 23,757 ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ಅರ್ಜಿ.. 10ನೇ ತರಗತಿ ಪಾಸ್ ಆಗಿದ್ರೆ ಸಾಕು!
India Post: ಭಾರತೀಯ ಅಂಚೆ ಇಲಾಖೆ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಭಾರತೀಯ ಅಂಚೆ ಇಲಾಖೆ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಇಂದಿನಿಂದ (ಆ.31) ಅರ್ಜಿ ನೋಂದಣಿ ಪ್ರಕ್ರಿಯೆ ಶುರುವಾಗಿದೆ. ಒಟ್ಟು 23,757 ಹುದ್ದೆಗಳನ್ನು ತುಂಬಲಾಗುತ್ತದೆ. ಅದರಲ್ಲಿ ಕರ್ನಾಟಕದಲ್ಲೇ 1,116 ಹುದ್ದೆಗಳು ಖಾಲಿಯಿವೆ.
ವಿದ್ಯಾರ್ಹತೆ: 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಹಾಕಬಹುದು. ಸ್ಥಳೀಯ ಭಾಷೆಯೂ ತಿಳಿದಿರಬೇಕು. ಕಂಪ್ಯೂಟರ್ ಜ್ಞಾನವು ಇರಬೇಕು.
ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ವಿಧಾನ: ಈ ಹುದ್ದೆಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲ. ಅಭ್ಯರ್ಥಿಯ 10ನೇ ತರಗತಿ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ದಪಡಿಸಿ, ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕಡೆ ದಿನ: ಸೆ.21ಕ್ಕೆ ಕೊನೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ https://www.indiapost.gov.in/gdsonlineengagementಗೆ ಸಂಪರ್ಕಿಸಿರಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.