IND vs SLA: ಇಂದಿನಿಂದ ಮೊದಲ ಟೆಸ್ಟ್ ಪಂದ್ಯ.. ಭಾರತ ಬ್ಯಾಟಿಂಗ್

IND vs SLA: ಇಂದಿನಿಂದ ಆಗಸ್ಟ್ 19 ರವರೆಗೆ ಭಾರತ ಹಾಗೂ ಶ್ರೀಲಂಕಾ ನಡುವೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ನಾಯಕ ಶುಭ್‌ಮನ್ ಗಿಲ್ ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಸದ್ಯ ಆಟ ಮುಂದುವರಿದಿದೆ.

Aug 15, 2026 - 12:27
Aug 15, 2026 - 12:29
IND vs SLA: ಇಂದಿನಿಂದ ಮೊದಲ ಟೆಸ್ಟ್ ಪಂದ್ಯ.. ಭಾರತ ಬ್ಯಾಟಿಂಗ್

ಗಾಲೆ: ಭಾರತವು ಶ್ರೀಲಂಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಇಂದಿನಿಂದ ಆಗಸ್ಟ್ 19 ರವರೆಗೆ ಮೊದಲ ಪಂದ್ಯ ನಡೆಯಲಿದೆ. ನಾಯಕ ಶುಭ್‌ಮನ್ ಗಿಲ್ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಸದ್ಯ ಆಟ ಮುಂದುವರಿದಿದೆ. ಟೀಂ ಇಂಡಿಯಾ 27 ಓವರ್‌ಗಳನ್ನು  ಆಡಿದ್ದು, 1 ವಿಕೆಟ್ ನಷ್ಟಕ್ಕೆ 101 ರನ್ ಕಲೆಹಾಕಿದೆ. ಯಶಸ್ವಿ ಜೈಸ್ವಾಲ್ 32 ರನ್ ಗಳಿಸಿ ಔಟ್ ಆಗಿದ್ದು, ಕೆ.ಎಲ್.ರಾಹುಲ್ (32) ಹಾಗೂ ದೇವದತ್ ಪಡಿಕ್ಕಲ್ (35) ಮೈದಾನದಲ್ಲಿದ್ದಾರೆ.

ಪ್ಲೇಯಿಂಗ್ 11

ಭಾರತ: ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ದೇವದತ್ ಪಡಿಕ್ಕಲ್, ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಕುಲದೀಪ್ ಯಾದವ್, ಮಾನವ್ ಸುತಾರ್ ಹಾಗೂ ಪ್ರಸಿದ್ಧ್‌ ಕೃಷ್ಣ.

ಶ್ರೀಲಂಕಾ: ಲಹಿರು ಉದಾರ, ನಿಶಾನ್ ಮದುಷ್ಕಾ, ದಿನೇಶ್ ಚಂಡಿಮಲ್, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ (ನಾಯಕ), ಸೋನಲ್ ದಿನುಷಾ, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಕೇಶರಾ ನುವಾಂತ, ಪ್ರಬಾತ್ ಜಯಸೂರ್ಯ, ಲಹಿರು ಕುಮಾರ ಮತ್ತು ಅಸಿತ ಫೆರ್ನಾಂಡೋ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.