ಪಾಕಿಸ್ತಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ

ಪಾಕಿಸ್ತಾನದ ಕರಾಚಿಯ ದೇವಸ್ಥಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾವನ್ನು ಪ್ರದರ್ಶನ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಭಕ್ತರು ಕಮೆಂಟ್ ಮಾಡುತ್ತಿದ್ದಾರೆ. ಸಾವಿರಾರು ಭಕ್ತರು ದೇವಸ್ಥಾನದ ಆವರಣದಲ್ಲಿ ಕುಳಿತು ಈ ಸಿನಿಮಾ ನೋಡಿದ್ದಾರೆ.

Dec 3, 2025 - 16:14
ಪಾಕಿಸ್ತಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ
Mahavatar Narsimha

‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣದ ‘ಮಹಾವತಾರ ನರಸಿಂಹ’ ಸಿನಿಮಾ 2025ರಲ್ಲಿ ಸೂಪರ್ ಹಿಟ್ ಆಗಿದೆ. 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಭಾರತದ ಮೊದಲ ಆನಿಮೇಟೆಡ್ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕಿದೆ. 2026ರ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಪೈಪೋಟಿ ನೀಡಲು ಈ ಸಿನಿಮಾ ಅರ್ಹತೆ ಪಡೆದಿರುವ ಸುದ್ದಿ ಇತ್ತೀಚೆಗಷ್ಟೇ ಕೇಳಿಬಂದಿತ್ತು. ಈಗ ಇನ್ನೊಂದು ಅಚ್ಚರಿಯ ವಿಷಯ ತಿಳಿದುಕೊಂಡಿದೆ. ಪಾಕಿಸ್ತಾನದಲ್ಲಿ ಕೂಡ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ ಕಂಡಿದೆ. ಪಾಕಿಸ್ತಾನದಲ್ಲಿ ಇರುವ ಹಿಂದೂಗಳು ಈ ಸಿನಿಮಾವನ್ನು ನೋಡಿ ಖುಷಿಪಟ್ಟಿದ್ದಾರೆ. 

 ಭಾರತದಲ್ಲಿ ವಿವಿಧ ಭಾಷೆಗಳಲ್ಲಿ ಬಿಡುಗಡೆ ಆದ ಈ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡರು. ಬಳಿಕ ಒಟಿಟಿಯಲ್ಲಿ ಕೂಡ ಬಿಡುಗಡೆ ಆಗಿ ಧೂಳೆಬ್ಬಿಸಿತು. ಈಗ ಪಾಕಿಸ್ತಾನದಲ್ಲಿ ಸಹ ಈ ಸಿನಿಮಾವನ್ನು ಪ್ರದರ್ಶನ ಮಾಡಲಾಗಿದೆ. ಅದು ಕೂಡ ದೇವಸ್ಥಾನದಲ್ಲಿ ಎಂಬುದು ವಿಶೇಷ!

ಪಾಕಿಸ್ತಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ ಆಗಿರುವುದು ಚಿತ್ರಮಂದಿರಗಳಲ್ಲಿ ಅಲ್ಲ. ಬದಲಿಗೆ, ಕರಾಚಿಯಲ್ಲಿ ಇರುವ ಸ್ವಾಮಿ ನಾರಾಯಣ ಮಂದಿರದಲ್ಲಿ ಭಕ್ತರಿಗಾಗಿ ಈ ಸಿನಿಮಾದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರು ದೇವಸ್ಥಾನದ ಆವರಣದಲ್ಲಿ ಸೇರಿಕೊಂಡು ದೊಡ್ಡ ಎಲ್​ಇಡಿ ಪರದೆಯಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾವನ್ನು ವೀಕ್ಷಿಸಿದ್ದಾರೆ.

ಕರಾಚಿಯ ಸ್ವಾಮಿ ನಾರಾಯಣ ಮಂದಿರದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ ಆಗುತ್ತಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ‘ಪಾಕಿಸ್ತಾನದಲ್ಲಿ ಮೊಟ್ಟ ಮೊದಲ ಬಾರಿಗೆ! ಸ್ವಾಮಿ ನಾರಾಯಣ ಮಂದಿರದಲ್ಲಿ ಮಹಾವತಾರ ನರಸಿಂಹ ಸಿನಿಮಾ ಪ್ರದರ್ಶನ’ ಎಂಬ ಕ್ಯಾಪ್ಷನ್​ನೊಂದಿಗೆ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.