Dr.Sadananda Poojary: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ
Dr.Sadananda Poojary: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಖ್ಯಾತ ಶಸ್ತ್ರಚಿಕಿತ್ಸಕ & ವೆನ್‌ಲಾಕ್ ಆಸ್ಪತ್ರೆಯ ಮೂತ್ರರೋಗ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಪೂಜಾರಿ ಅವರು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರು: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಖ್ಯಾತ ಶಸ್ತ್ರಚಿಕಿತ್ಸಕ & ವೆನ್‌ಲಾಕ್ ಆಸ್ಪತ್ರೆಯ ಮೂತ್ರರೋಗ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಪೂಜಾರಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿವಮೊಗ್ಗದಲ್ಲಿ ಅ.23 ಹಾಗೂ 24 ರಂದು ಜರುಗುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಈಚೆಗೆ ಬೆಂಗಳೂರಿನಲ್ಲಿ 'ಭಾರತೀಯ ವೈದ್ಯಕೀಯ ಸಂಘ'ದ ರಾಜ್ಯ ಸಂಸ್ಥೆಯ ವಾರ್ಷಿಕ ಆಡಳಿತ ಮಂಡಳಿ ಚುನಾವಣೆ ನಡೆಯಿತು.
ಹಲವು ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಡಾ.ಸದಾನಂದ ಪೂಜಾರಿ ಅವರಿಗೆ, ಡಾ.ಬಿ.ಸಿ.ರಾಯ್ ಪ್ರಶಸ್ತಿ ಸೇರಿದಂತೆ ಹತ್ತಾರು ಗೌರವಗಳು ಒಲಿದಿವೆ. ಸದ್ಯ, ಅವರು 'ಭಾರತೀಯ ವೈದ್ಯಕೀಯ ಸಂಘ' ಮಂಗಳೂರು ಶಾಖೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಭಾರತೀಯ ವೈದ್ಯಕೀಯ ಸಂಘವು ರಾಜ್ಯದಲ್ಲಿ 175 ಶಾಖೆಗಳು ಹಾಗೂ 38 ಸಾವಿರ ಸದಸ್ಯರನ್ನು ಹೊಂದಿದೆ. ಅವರ ಆಯ್ಕೆಗೆ ವೈದ್ಯಕೀಯ ಕ್ಷೇತ್ರದ ಗಣ್ಯರು, ಸಹೋದ್ಯೋಗಿಗಳು ಮತ್ತು ಹಿತೈಷಿಗಳು ಅಭಿನಂದಿಸಿದ್ದಾರೆ.