ಇಂದ್ರಪ್ರಸ್ಥ ವಿದ್ಯಾಲಯ: 'ಆಟಿದ ಅಟ್ಟಣೆ' ಕಾರ್ಯಕ್ರಮ

Indraprastha Vidyalaya: ಇಂದ್ರಪ್ರಸ್ಥ ವಿದ್ಯಾಲಯದ ಇಂದ್ರಪ್ರಭಾ ಆಡಿಟೋರಿಯಂನಲ್ಲಿ, ಆಟಿ ತಿಂಗಳ ವಿಶೇಷತೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 'ಆಟಿದ ಅಟ್ಟಣೆ - ತುಳುವ ಸಂಸ್ಕೃತಿ ಒರಿಪುಗ' ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು.

Aug 16, 2026 - 09:35
ಇಂದ್ರಪ್ರಸ್ಥ ವಿದ್ಯಾಲಯ: 'ಆಟಿದ ಅಟ್ಟಣೆ' ಕಾರ್ಯಕ್ರಮ

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದ ಇಂದ್ರಪ್ರಭಾ ಆಡಿಟೋರಿಯಂನಲ್ಲಿ, ಆಟಿ ತಿಂಗಳ ವಿಶೇಷತೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 'ಆಟಿದ ಅಟ್ಟಣೆ - ತುಳುವ ಸಂಸ್ಕೃತಿ ಒರಿಪುಗ' ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಯಿತು.     

ವಿದ್ಯಾರ್ಥಿಗಳು ಸಭಾಂಗಣದವನ್ನು ತುಳುವ ಸಂಸ್ಕೃತಿಗೆ ಮೆರುಗು ನೀಡುವಂತೆ ಅಲಂಕರಿಸಿದರು.  ಆರೋಗ್ಯವನ್ನು ಕಾಪಾಡಿಕೊಳ್ಳುವ ಸಲುವಾಗಿ ಆಟಿ ತಿಂಗಳಿನಲ್ಲಿ ತಯಾರಿಸುವ ವಿವಿಧ ಖಾದ್ಯಗಳನ್ನು ಮನೆಗಳಿಂದ ತಂದು, ಅವುಗಳನ್ನು ಒಪ್ಪ ಓರಣವಾಗಿ ಜೋಡಿಸಿದ್ದರು. 

ಆಟಿ ದಿನದ ಮಹತ್ವವನ್ನು ಸಾರುವ ಸಂದೇಶವನ್ನು ದೃಶ್ಯ ಮಾಧ್ಯಮದ ಮೂಲಕ ಬಿತ್ತರಿಸಲಾಯಿತು. ಆಟಿ ಕಳೆಂಜ ವೇಷವನ್ನು ವಿದ್ಯಾರ್ಥಿಗಳು ಧರಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. 
  
ಇದನ್ನು ವಿದ್ಯಾಸಂಸ್ಥೆಯ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರು ವೀಕ್ಷಿಸಿ, ಮೆಚ್ಚುಗೆ ವ್ಯಕ್ತ ಪಡಿಸಿದರು. ವಿದ್ಯಾರ್ಥಿಗಳು ತಾವು ತಂದ ಖಾದ್ಯಗಳನ್ನು ಅತಿಥಿ ಗಣ್ಯರು, ಶಿಕ್ಷಕ ವೃಂದದವರು ಮತ್ತು ಸ್ನೇಹಿತರಿಗೆ ಉಣಬಡಿಸಿ ಸಂಭ್ರಮಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.