ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ
Indraprastha Vidyalaya: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ರಾಜ್ಯ ಮಟ್ಟ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಉಪ್ಪಿನಂಗಡಿ: 'ವಿದ್ಯಾಭಾರ'ತಿ ವತಿಯಿಂದ ಮಂಗಳೂರಿನ ಶಕ್ತಿ ವಸತಿ ಶಾಲೆಯಲ್ಲಿ ಈಚೆಗೆ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ನಡೆಯಿತು.
ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಸಿ.ಹೆಚ್, 100 ಮೀ. ಬ್ಯಾಕ್‌ಸ್ಟ್ರೋಕ್, 50 ಮೀ. ಬ್ಯಾಕ್ ಸ್ಟ್ರೋಕ್ ಹಾಗೂ 50 ಮೀ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಜಯಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಯನ್ನು ಆಡಳಿತ ಮಂಡಳಿ ಸದಸ್ಯರು, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ಮತ್ತು ಶಿಕ್ಷಕ ವೃಂದದವರು ಪ್ರಶಂಸಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಜಯ್ ಅಂಬೇಕರ್
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.