ಅಂತರ ಕಾಲೇಜು ಮಹಿಳಾ ಫುಟ್‌ಬಾಲ್ ಪಂದ್ಯಾವಳಿ: ಸಂತ ಫಿಲೋಮಿನಾ ಕಾಲೇಜು ತಂಡ ರನ್ನರ್-ಅಪ್
St Philomena College: ಮಂಗಳೂರು ವಿವಿ ಮಟ್ಟದ ಅಂತರ ಕಾಲೇಜು ಮಹಿಳಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ, ಸಂತ ಫಿಲೋಮಿನಾ ಕಾಲೇಜಿನ ಮಹಿಳಾ ತಂಡ ರನ್ನರ್-ಅಪ್ ಆಗಿದೆ.
ಪುತ್ತೂರು: ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಈಚೆಗೆ ಏರ್ಪಡಿಸಿದ್ದ ಮಂಗಳೂರು ವಿವಿ ಮಟ್ಟದ ಅಂತರ ಕಾಲೇಜು ಮಹಿಳಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ, ಸಂತ ಫಿಲೋಮಿನಾ ಕಾಲೇಜಿನ ಮಹಿಳಾ ತಂಡ ರನ್ನರ್-ಅಪ್ ಆಗಿದೆ.
ಈ ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ರೆ.ಡಾ.ಆ್ಯಂಟನಿ ಪ್ರಕಾಶ್ ಮೊಂತೆರೊ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಿನ ಪಂದ್ಯಾವಳಿಗಳಲ್ಲಿಯೂ ಇದೇ ರೀತಿಯ ಪ್ರಯತ್ನ ಮುಂದುವರಿಸುವಂತೆ ಆಟಗಾರ್ತಿಯರನ್ನು ಪ್ರೋತ್ಸಾಹಿಸಿ, ತಂಡಕ್ಕೆ ಮಾರ್ಗದರ್ಶನ ಹಾಗೂ ಬೆಂಬಲ ನೀಡಿದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕಿ ಹರ್ಷಿತಾ ಶೆಟ್ಟಿ ಅವರನ್ನು ಅಭಿನಂದಿಸಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಬೋಧಕವರ್ಗ ಹಾಗೂ ವಿದ್ಯಾರ್ಥಿಗಳು ಮಹಿಳಾ ಫುಟ್‌ಬಾಲ್ ತಂಡಕ್ಕೆ ಶುಭ ಕೋರಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.