Irumudi: ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿದ 'ಇರುಮುಡಿ'

Irumudi: 'ಮಾಸ್ ಮಹಾರಾಜ' ರವಿತೇಜ ನಟನೆಯ 'ಇರುಮುಡಿ' ಸಿನಿಮಾ, ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ.

Aug 24, 2026 - 15:52
Aug 26, 2026 - 08:42
Irumudi: ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿದ 'ಇರುಮುಡಿ'

'ಮಾಸ್ ಮಹಾರಾಜ' ರವಿತೇಜ (Ravi Teja) ನಟನೆಯ ಇರುಮುಡಿ (Irumudi) ಸಿನಿಮಾ, ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಇದೇ ಶುಕ್ರವಾರ ರಿಲೀಸ್ ಆಗಿತ್ತು. 3ನೇ ದಿನವಾದ ಭಾನುವಾರದಂದು ರೂ.18.80 ಕೋಟಿ ನೆಟ್ ಕಲೆಕ್ಷನ್ ಮಾಡಿದ್ದು, 3,078 ಶೋಗಳು ಪ್ರದರ್ಶನಗೊಂಡಿವೆ. ಇದರೊಂದಿಗೆ ವಿಶ್ವಾದ್ಯಂತ ರೂ.58.37 ಕೋಟಿ (ಗ್ರಾಸ್) ಬಾಚಿದೆ. 

ಈ ಚಿತ್ರ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಬಿಡುಗಡೆಗೊಂಡಿದೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಿದೆ. ಶಿವ ನಿರ್ವಾಣ ಆಕ್ಷನ್ ಕಟ್ ಹೇಳಿದ್ದಾರೆ. ಇದರ ಕಥೆಯು ಅಪ್ಪ ಹಾಗೂ ಮಗಳ ನಡುವಿನ ಭಾವನಾತ್ಮಕ ಸಂಬಂಧದ ಸುತ್ತ ಸುತ್ತುತ್ತದೆ.

ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ರವಿತೇಜ ಹಾಗೂ ಮಗಳ ಪಾತ್ರದಲ್ಲಿ ನಟಿಸಿರುವ ಬೇಬಿ ನಕ್ಷತ್ರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. 

ಪ್ರಿಯಾ ಭವಾನಿ ಶಂಕರ್ (ನಾಯಕಿ), ಸಾಯಿ ಕುಮಾರ್, ಅಜಯ್ ಘೋಷ್ ಮತ್ತು ರಮೇಶ್ ಇಂದಿರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಿ.ವಿ.ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದು, ವಿಷ್ಣು ಶರ್ಮಾ ಕ್ಯಾಮೆರಾ ವರ್ಕ್ ಮಾಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.