ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಸ್ವಾಮಿಗೆ ಕ್ಷೀರಾಭಿಷೇಕ

Ishwaramangala: July 12 Kodandarama & Panchmukhi Anjaneya Swami Ksheerabhishekam: ಜುಲೈ 12 ಭಾನುವಾರದಂದು ಈಶ್ವರಮಂಗಲದ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಸ್ವಾಮಿಗೆ ಸಾವಿರ ಲೀಟರ್ ಕ್ಷೀರಾಭಿಷೇಕವನ್ನು ನಡೆಸಲಾಗುತ್ತದೆ.

Jul 10, 2026 - 12:03
Jul 10, 2026 - 12:04
ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಸ್ವಾಮಿಗೆ ಕ್ಷೀರಾಭಿಷೇಕ

ಪುತ್ತೂರು: ಜುಲೈ 12 ಭಾನುವಾರದಂದು ಈಶ್ವರಮಂಗಲದ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಸ್ವಾಮಿಗೆ ಸಾವಿರ ಲೀಟರ್ ಕ್ಷೀರಾಭಿಷೇಕವನ್ನು ನಡೆಸಲಾಗುತ್ತದೆ. ಬೆಂಗಳೂರಿನ ಉದ್ಯಮಿ ಬಾಲಕೃಷ್ಣ ಅವರ ಸೇವಾರ್ಥ, ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ನೇತೃತ್ವದಲ್ಲಿ ಈ ಸೇವಾ ಕಾರ್ಯವು ಜರುಗಲಿದೆ.

ಅಂದು ಬೆಳಗ್ಗೆ 6 ರಿಂದ  8 ರವರೆಗೆ ಸುಪ್ರಭಾತ (ಸದಾನಂದ ಶಾಸ್ತ್ರಿ) ಸೇವೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಕೋದಂಡರಾಮ ಸ್ವಾಮಿಗೆ 1000 ಲೀಟರ್ ಕ್ಷೀರಾಭಿಷೇಕ ಹಾಗೂ ಮಹಾಪೂಜೆ ನೆರವೇರಿಸಲಾಗುತ್ತದೆ. ಆ ಬಳಿಕ ಪ್ರಸಾದ ವಿತರಣೆ ಮಾಡಲಾಗುತ್ತದೆ.  

ಬೆಳಗ್ಗೆ 10 ರಿಂದ 12.30 ರವರೆಗೆ ಸಾಮೂಹಿಕ ಭಜನೆ (300 ಭಜಕರಿಂದ) ಏರ್ಪಡಿಸಲಾಗಿದೆ. ಬೆಳಗ್ಗೆ 10.30ಕ್ಕೆ ಪಂಚಮುಖಿ ಆಂಜನೇಯ ಸ್ವಾಮಿಗೆ  ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ. ಅನ್ನಸಂತರ್ಪಣೆಗೂ ವ್ಯವಸ್ಥೆ ಕಲ್ಪಿಸಲಾಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.