ಈಶ್ವರಮಂಗಲ ಪೊಲೀಸ್ ಹೊರಠಾಣೆಯಲ್ಲಿ ವಿಜೃಂಭಣೆಯ ಆಯುಧ ಪೂಜೆ

Ishwaramangala: ಇಲ್ಲಿನ ಪೊಲೀಸ್ ಹೊರಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು.

Oct 20, 2026 - 16:09
Oct 20, 2026 - 16:56
ಈಶ್ವರಮಂಗಲ ಪೊಲೀಸ್ ಹೊರಠಾಣೆಯಲ್ಲಿ ವಿಜೃಂಭಣೆಯ ಆಯುಧ ಪೂಜೆ

ಈಶ್ವರಮಂಗಲ: ಇಲ್ಲಿನ ಪೊಲೀಸ್ ಹೊರಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಶ್ರದ್ಧಾ-ಭಕ್ತಿ ಹಾಗೂ ಸೌಹಾರ್ದದ ವಾತಾವರಣದಲ್ಲಿ ವಿಜೃಂಭಣೆಯಿಂದ ನೆರವೇರಿತು.
 
ಬೆಳಗ್ಗೆಯಿಂದಲೇ ಠಾಣೆಯ ಆವರಣದಲ್ಲಿ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡವು. ವಿಘ್ನನಿವಾರಕ ಗಣಪತಿ ಹೋಮ, ದುರ್ಗಾ ಪೂಜೆ ಹಾಗೂ ಪೊಲೀಸ್ ಇಲಾಖೆಯ ವಾಹನಗಳಿಗೆ ವಿಶೇಷ ವಾಹನ ಪೂಜೆಯನ್ನು ನೆರವೇರಿಸಲಾಯಿತು. ಠಾಣೆಯ ಕಚೇರಿ ಆವರಣ ಮತ್ತು ವಾಹನಗಳನ್ನು ವರ್ಣರಂಜಿತ ಹೂವುಗಳು ಹಾಗೂ ತಳಿರು-ತೋರಣಗಳಿಂದ ಅಲಂಕರಿಸಲಾಗಿತ್ತು.
 
ಪೊಲೀಸ್ ಇಲಾಖೆಯ ಕರ್ತವ್ಯ ನಿರ್ವಹಣೆಯಲ್ಲಿ ಬಳಸುವ ಆಯುಧಗಳು, ವಾಹನಗಳು ಹಾಗೂ ಉಪಕರಣಗಳಿಗೆ ಪೂಜೆ ಸಲ್ಲಿಸುವ ಮೂಲಕ ಸಿಬ್ಬಂದಿ ತಮ್ಮ ಕರ್ತವ್ಯದಲ್ಲಿ ಯಶಸ್ಸು, ಸುರಕ್ಷತೆ ಮತ್ತು ಒಳಿತಿಗಾಗಿ ಪ್ರಾರ್ಥಿಸಿದರು.
 
ಈ ವೇಳೆ ಈಶ್ವರಮಂಗಲ ಪೊಲೀಸ್ ಹೊರಠಾಣೆಯ ಸಹಾಯಕ ಉಪನಿರೀಕ್ಷಕ (ಎಎಸ್‌ಐ) ಸುರೇಶ್, ಹೆಡ್ ಕಾನ್‌ಸ್ಟೇಬಲ್ ನಾಗರಾಜ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಕಾರ್ತಿಕ್, ಹರಿಪ್ರಸಾದ್, ನಿತೇಶ್, ನವೀನ್, ದಿನೇಶ್, ಅಜಯ್, ಹಕೀಮ್ ಮತ್ತು ಲಲಿತಾ ಉಪಸ್ಥಿತರಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.