ISRO: ಯುವ ಜನತೆಗೆ ಇಸ್ರೋ ಸೇರಲು ಸುವರ್ಣಾವಕಾಶ

ISRO 410 Apprentice Recruitment: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಯು.ಆರ್.ರಾವ್ ಉಪಗ್ರಹ ಕೇಂದ್ರದಲ್ಲಿ ಖಾಲಿಯಿರುವ 410 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

Aug 4, 2026 - 14:56
ISRO: ಯುವ ಜನತೆಗೆ ಇಸ್ರೋ ಸೇರಲು ಸುವರ್ಣಾವಕಾಶ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಯು.ಆರ್.ರಾವ್ ಉಪಗ್ರಹ ಕೇಂದ್ರದಲ್ಲಿ ಖಾಲಿಯಿರುವ 410 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ವಿದ್ಯಾರ್ಹತೆ: ಈ ಅಪ್ರೆಂಟಿಸ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಜಿನಿಯರಿಂಗ್/ ಡಿಪ್ಲೊಮಾ ತೇರ್ಗಡೆಯಾಗಿರಬೇಕು. 'ಭಾರತೀಯ ಪ್ರಜೆಗಳು' ಮಾತ್ರವೇ ಅರ್ಜಿ ಸಲ್ಲಿಕೆ ಮಾಡಬಹುದು. 

2022, 2023, 2024, 2025 ಹಾಗೂ 2026ರಲ್ಲಿ ಶಿಕ್ಷಣವನ್ನು ಪೂರೈಸಿದವರು ಅಪ್ರೆಂಟಿಸ್‌ಶಿಪ್‌ಗೆ ಅರ್ಹರಾಗಿರುತ್ತಾರೆ. 2021 ಕ್ಕಿಂತ ಮೊದಲು ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಹರಾಗಿರುವುದಿಲ್ಲ. 

ತರಬೇತಿ ಅವಧಿ & ವೇತನ: ಆಯ್ಕೆಯಾದ ಅಭ್ಯರ್ಥಿಗಳು 12 ತಿಂಗಳು ಕೆಲಸ ಮಾಡಬೇಕಾಗಿದೆ.ಆಯ್ಕೆಯಾದವರಿಗೆ ಹುದ್ದೆಗೆ ಅನುಗುಣವಾಗಿ ರೂ.10,900 ರಿಂದ ರೂ.12,300 ಸ್ಟೈಪೆಂಡ್ ನೀಡಲಾಗಿದೆ. 

ಅರ್ಜಿ ಸಲ್ಲಿಸಲು ಕಡೆ ದಿನ: ಆಗಸ್ಟ್ 28 ಕೊನೆಯಾಗಿದ್ದು, ಹೆಚ್ಚಿನ ಮಾಹಿತಿಗೆ https://www.isro.gov.in/Careers.htmlಗೆ ಸಂಪರ್ಕಿಸಿರಿ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.