ISRO: ಇಸ್ರೋದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ
ISRO: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 244 ಹುದ್ದೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಜೂನಿಯರ್ ಪರ್ಸನಲ್ ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್ ಹಾಗೂ ಸ್ಟೆನೋಗ್ರಾಫರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 244 ಹುದ್ದೆಗಳು ಖಾಲಿಯಿವೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 60% ಅಥವಾ 6.32 ಸಿಜಿಪಿಎ ಅಂಕಗಳೊಂದಿಗೆ ಪದವಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 31 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 33 ವರ್ಷಗಳವರೆಗೆ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ರೂ.500 ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಲಿಖಿತ ಪರೀಕ್ಷೆ ಬಳಿಕ ನಿಯಮಾನುಸಾರ ಮರುಪಾವತಿಸಲಾಗುತ್ತದೆ. ದೇಶಾದ್ಯಂತ ಅಗರ್ತಲಾ, ಅಹಮದಾಬಾದ್ ಹಾಗೂ ಬೆಂಗಳೂರು ಸೇರಿದಂತೆ 38 ಸ್ಥಳಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಲು ಕಡೆ ದಿನ: ಆಗಸ್ಟ್ 16 ಕೊನೆಯಾಗಿದ್ದು, ಹೆಚ್ಚಿನ ಮಾಹಿತಿಗೆ https://www.isro.gov.in/Careers.htmlಗೆ ಸಂಪರ್ಕಿಸಿರಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.