ISRO: ಇಸ್ರೋ ಸೇರಲು ಸುವರ್ಣಾವಕಾಶ

ISRO: ಇಸ್ರೋ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಟೆಲಿಮೆಟ್ರಿ, ಟ್ರ್ಯಾಕಿಂಗ್ & ಕಮಾಂಡ್ ನೆಟ್‌ವರ್ಕ್ ವಿಭಾಗದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

Jul 14, 2026 - 13:38
Jul 14, 2026 - 13:40
ISRO: ಇಸ್ರೋ ಸೇರಲು ಸುವರ್ಣಾವಕಾಶ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಟೆಲಿಮೆಟ್ರಿ, ಟ್ರ್ಯಾಕಿಂಗ್ & ಕಮಾಂಡ್ ನೆಟ್‌ವರ್ಕ್ (ISTRAC) ವಿಭಾಗದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 

ಒಟ್ಟು 26 ಹುದ್ದೆಗಳನ್ನು ತುಂಬಲಾಗುತ್ತದೆ. ಸಂಬಂಧಪಟ್ಟ ವಿಷಯದಲ್ಲಿ ಐಟಿಐ, ಡಿಪ್ಲೊಮಾ ಅಥವಾ ಪದವಿ ಉತ್ತೀರ್ಣರಾಗಿರಬೇಕು. 

ಕನಿಷ್ಠ 18 ಮತ್ತು ಗರಿಷ್ಠ  35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆಯಾದವರಿಗೆ ಮಾಸಿಕ ರೂ.19,900 ರಿಂದ 44,900 ವರೆಗೆ ವೇತನವನ್ನು ಕೊಡಲಾಗುತ್ತದೆ. ಅರ್ಜಿ ಸಲ್ಲಿಸಲು ಇದೇ ಜುಲೈ 20 ಕಡೆ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿರಿ

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.