Jailer-2: ಜೈಲರ್-2ಗೆ ಜೈ ಎಂದ ಪ್ರೇಕ್ಷಕ.. ಮೊದಲ ದಿನವೇ 70.25 ಕೋಟಿ ಕಲೆಕ್ಷನ್!

Jailer-2: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ತಮಿಳಿನ ಆಕ್ಷನ್-ಕಾಮಿಡಿ ಥ್ರಿಲ್ಲರ್ ಸಿನಿಮಾ 'ಜೈಲರ್ 2' ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ.

Oct 16, 2026 - 16:42
Jailer-2: ಜೈಲರ್-2ಗೆ ಜೈ ಎಂದ ಪ್ರೇಕ್ಷಕ.. ಮೊದಲ ದಿನವೇ 70.25 ಕೋಟಿ ಕಲೆಕ್ಷನ್!

Jailer-2: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ತಮಿಳಿನ ಆಕ್ಷನ್-ಕಾಮಿಡಿ ಥ್ರಿಲ್ಲರ್ ಸಿನಿಮಾ 'ಜೈಲರ್ 2' ನಿನ್ನೆಯಷ್ಟೇ (ಅ.15) ಬಿಡುಗಡೆಯಾಗಿತ್ತು. ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. 

ಸ್ಯಾಕ್ನಿಲ್ಕ್ ಪ್ರಕಾರ, ರೂ.59.70 ಕೋಟಿ ನೆಟ್ ಗಳಿಕೆಯಾಗಿದ್ದು, 16,599 ಶೋಗಳು ಪ್ರದರ್ಶನಗೊಂಡಿವೆ. ಈ ಮೂಲಕ ವಿಶ್ವಾದ್ಯಂತ ರೂ.70.25 ಗ್ರಾಸ್ ಕಲೆಕ್ಷನ್ ಮಾಡಿದೆ. 

ರಜನಿಕಾಂತ್ ಟೈಗರ್ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ರಮ್ಯಾ ಕೃಷ್ಣನ್, ಯೋಗಿ ಬಾಬು, ಮಿರ್ನಾ ಮೆನನ್, ರಿತ್ವಿಕ್, ಎಸ್‌ಜೆ ಸೂರ್ಯ, ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್ ಹಾಗೂ ಸೂರಜ್ ವೆಂಜರಮೂಡು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ನೆಲ್ಸನ್ ದಿಲೀಪ್‌ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಸನ್ ಪಿಕ್ಚರ್ಸ್ ಬ್ಯಾನರ್‌ನಡಿ ನಿರ್ಮಿಸಲಾಗಿದೆ. ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.