Jailer-2: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಜೈಲರ್-2 OTTಯಲ್ಲಿ ಸ್ಟ್ರೀಮಿಂಗ್!

Jailer-2: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ತಮಿಳಿನ 'ಜೈಲರ್ 2' ಸೂಪರ್ ಹಿಟ್ ಆಗಿದ್ದು, ಓಟಿಟಿಯಲ್ಲೂ ಬಿಡುಗಡೆಗೊಂಡಿದೆ.

Nov 15, 2026 - 09:30
Nov 14, 2026 - 16:35
Jailer-2: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಜೈಲರ್-2 OTTಯಲ್ಲಿ ಸ್ಟ್ರೀಮಿಂಗ್!

Jailer-2: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ತಮಿಳಿನ ಆಕ್ಷನ್-ಕಾಮಿಡಿ ಥ್ರಿಲ್ಲರ್ ಸಿನಿಮಾ 'ಜೈಲರ್ 2' ಸೂಪರ್ ಹಿಟ್ ಆಗಿದ್ದು, ಓಟಿಟಿಯಲ್ಲೂ ಬಿಡುಗಡೆಗೊಂಡಿದೆ. ಇದೇ ನ.12 ರಿಂದ 'ಅಮೆಜಾನ್ ಪ್ರೈಮ್'ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ತಮಿಳು, ಕನ್ನಡ, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ವೀಕ್ಷಣೆಗೆ ಲಭ್ಯವಿದೆ. 
 
ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು, ವಿಶ್ವಾದ್ಯಂತ ರೂ.830.75 ಗ್ರಾಸ್ ಗಳಿಕೆ ಕಂಡಿದೆ. ರಜನಿಕಾಂತ್ ಟೈಗರ್ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಅಬ್ಬರಿಸಿದ್ದಾರೆ. 
 
ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶಿಸಿದ್ದಾರೆ. ಸನ್ ಪಿಕ್ಚರ್ಸ್ ಬ್ಯಾನರ್‌ನಡಿ ನಿರ್ಮಾಣ ಮಾಡಲಾಗಿದೆ. ಅನಿರುದ್ಧ್ ರವಿಚಂದರ್ ಮ್ಯೂಸಿಕ್ ನೀಡಿದ್ದಾರೆ.
 
ಶಿವ ರಾಜ್‌ಕುಮಾರ್, ಮೋಹನ್‌ಲಾಲ್, ಹೃತಿಕ್ ರೋಷನ್, ವಿದ್ಯಾ ಬಾಲನ್, ಎಸ್.ಜೆ.ಸೂರ್ಯ, ರಮ್ಯಾ ಕೃಷ್ಣನ್, ಮಿಥುನ್ ಚಕ್ರವರ್ತಿ, ಜಾಕಿ ಶ್ರಾಫ್, ಯೋಗಿ ಬಾಬು ಹಾಗೂ ಮಿರ್ನಾ ಮೆನನ್ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.