ಜಾನಕಿ ವಿ v/s ಸ್ಟೇಟ್ ಆಫ್ ಕೇರಳ ಒಟಿಟಿಯಲ್ಲಿ ಸ್ಟ್ರೀಮಿಂಗ್

Janaki V v/s State of Kerala: ಮಲಯಾಳಂನ ಲೀಗಲ್ ಥ್ರಿಲ್ಲರ್ ಸಿನಿಮಾ 'ಜಾನಕಿ ವಿ v/s ಸ್ಟೇಟ್ ಆಫ್ ಕೇರಳ' ಒಟಿಟಿಯಲ್ಲಿ ಬಿಡುಗಡೆಗೊಂಡಿದೆ.

Aug 17, 2026 - 18:20
ಜಾನಕಿ ವಿ v/s ಸ್ಟೇಟ್ ಆಫ್ ಕೇರಳ ಒಟಿಟಿಯಲ್ಲಿ ಸ್ಟ್ರೀಮಿಂಗ್

ಮಲಯಾಳಂನ ಲೀಗಲ್ ಥ್ರಿಲ್ಲರ್ ಸಿನಿಮಾ ಜಾನಕಿ ವಿ v/s ಸ್ಟೇಟ್ ಆಫ್ ಕೇರಳ (Janaki V v/s State of Kerala) ಒಟಿಟಿಯಲ್ಲಿ ಬಿಡುಗಡೆಗೊಂಡಿದೆ. ಇದೇ ಆಗಸ್ಟ್ 15 ರಿಂದ 'ಜೀ5' ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. 

ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ಪ್ರವಿಣ್ ನಾರಾಯಣನ್ ಆಕ್ಷನ್ ಕಟ್ ಹೇಳಿದ್ದು, ಜೆ.ಫಣೀಂದ್ರ ಕುಮಾರ್ ನಿರ್ಮಿಸಿದ್ದಾರೆ. ಈ ಚಿತ್ರವು ಜುಲೈ 17 ರಂದು ರಿಲೀಸ್ ಆಗಿತ್ತು. ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಉತ್ತಮ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಸುರೇಶ್ ಗೋಪಿ, ಅನುಪಮಾ ಪರಮೇಶ್ವರನ್, ದಿವ್ಯಾ ಪಿಳ್ಳೈ, ಶ್ರುತಿ ರಾಮಚಂದ್ರನ್, ಹಾಗೂ ಮಾಧವ್ ಸುರೇಶ್ ಗೋಪಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.