'ಜನನಿ' ನವೋದಯ ಸ್ವ-ಸಹಾಯ ಸಂಘ ರಚನೆ

Janani: ನವೋದಯ ಒಕ್ಕೂಟ ವ್ಯಾಪ್ತಿಯ ಕಾವು ಶಿವಪೇಟೆಯಲ್ಲಿ 10 ಸದಸ್ಯರನ್ನೊಳಗೊಂಡ ನೂತನ ಸ್ವ-ಸಹಾಯ ಸಂಘ 'ಜನನಿ'ಯನ್ನು ರಚಿಸಲಾಯಿತು.

Sep 27, 2026 - 13:15
'ಜನನಿ' ನವೋದಯ ಸ್ವ-ಸಹಾಯ ಸಂಘ ರಚನೆ

ಕಾವು: ಇಲ್ಲಿನ ನವೋದಯ ಒಕ್ಕೂಟ ವ್ಯಾಪ್ತಿಯ ಕಾವು ಶಿವಪೇಟೆಯಲ್ಲಿ 10 ಸದಸ್ಯರನ್ನೊಳಗೊಂಡ ನೂತನ ಸ್ವ-ಸಹಾಯ ಸಂಘ 'ಜನನಿ'ಯನ್ನು ರಚಿಸಲಾಯಿತು.

 ಹೊಸ ಸಂಘವನ್ನು ದೇವಿಪ್ರಸಾದ್ ಅವರು, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. 

 ಆ ಬಳಿಕ ಕಾವು ವಲಯ ಪ್ರೇರಕಿ ಗಾಯತ್ರಿ ಕೆ.ಎಸ್, ಸಂಘದ ನಿಯಮ ನಿಬಂಧನೆಗಳು, ಉಳಿತಾಯ ಹಾಗೂ ಸಾಲ ಸೌಲಭ್ಯಗಳ ಕುರಿತು ವಿವರಿಸಿದರು.

ಕಾವು ನವೋದಯ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಚಿದಾನಂದ ಆಚಾರ್ಯ ಮಾತನಾಡಿ, ಕಾವು ನವೋದಯ ಒಕ್ಕೂಟ ನಡೆದುಬಂದ ಹಾದಿ ಮತ್ತು ಮುಂದೆ ಸದಸ್ಯರಿಗಾಗಿ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿ, ಎಲ್ಲರ ಸಹಕಾರ ಕೋರಿದರು.

ಜನನಿ ಸಂಘದ ಅಧ್ಯಕ್ಷರಾಗಿ ದೇವಿಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿ ಅಶ್ವಥ್ ಅವರನ್ನು ಆಯ್ಕೆ ಮಾಡಲಾಯಿತು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.