Jay Shah: ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಮರು ನೇಮಕ

Jay Shah: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ, ಎರಡನೇ ಅವಧಿಗೆ ಅವಿರೋಧವಾಗಿ ಮರು ನೇಮಕಗೊಂಡಿದ್ದಾರೆ.

Nov 16, 2026 - 11:51
Nov 16, 2026 - 11:53
Jay Shah: ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಮರು ನೇಮಕ

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಧ್ಯಕ್ಷರಾಗಿ ಜಯ್ ಶಾ (Jay Shah), ಎರಡನೇ ಅವಧಿಗೆ ಅವಿರೋಧವಾಗಿ ಮರು ನೇಮಕಗೊಂಡಿದ್ದಾರೆ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ 'ಐಸಿಸಿ' ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
 
'ಐಸಿಸಿ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ. ಪ್ರತಿಯೊಬ್ಬ ನಿರ್ದೇಶಕರ ನಿರಂತರ ಬೆಂಬಲಕ್ಕೆ ಪ್ರಾಮಾಣಿಕವಾಗಿ ಕೃತಜ್ಞತೆ ಸಲ್ಲಿಸುತ್ತೆನೆ' ಎಂದು ಜಯ್ ಶಾ ಹೇಳಿದ್ದಾರೆ.
 
2027ರ ಏಕದಿನ ವಿಶ್ವಕಪ್ ಮತ್ತು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಯಂತಹ ವಿಚಾರಗಳಲ್ಲಿ ನಾಯಕತ್ವದ ಸ್ಥಿರತೆ ಕಾಯ್ದುಕೊಳ್ಳಲು ಐಸಿಸಿ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ವರದಿಯಾಗಿದೆ.
 
ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಅಧ್ಯಕ್ಷ ರಿಚರ್ಡ್ ಥಾಂಪ್ಸನ್, ಜಯ್ ಶಾ ಮರು ನೇಮಕಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪ್ರಮುಖ ಬೆಳವಣಿಗೆಯಾಗಿದೆ ಎಂದು ಬಣ್ಣಿಸಿದ್ದಾರೆ. 
 
2024ರ ಡಿಸೆಂಬರ್ 1 ರಂದು ಮೊದಲ ಬಾರಿಗೆ ಐಸಿಸಿ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಂಡಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.