ಬಿಡದಿ ಟೌನ್‌ಶಿಪ್ ವಿರುದ್ಧ JDS ಪಾದಯಾತ್ರೆಗೆ ಚಾಲನೆ: BJP ಬೆಂಬಲ
JDS Padayatra: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ, ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಇಂದು (ಭಾನುವಾರ) ರಾಮನಗರದ ಬೈರಮಂಗಲ ಗ್ರಾಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಚಾಲನೆ ನೀಡಿದ್ದಾರೆ.
ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ, ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಇಂದು (ಭಾನುವಾರ) ರಾಮನಗರದ ಬೈರಮಂಗಲ ಗ್ರಾಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಚಾಲನೆ ನೀಡಿದ್ದಾರೆ.
ಇಂದಿನಿಂದ 3 ದಿನಗಳು, ಅಂದರೆ ಆಗಸ್ಟ್ 11 ವರೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದಲ್ಲಿ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂಪಾರ್ಕ್ವರೆಗೂ ಈ ಪಾದಯಾತ್ರೆ ನಡೆಯಲಿದೆ.
'ನಮ್ಮ ಭೂಮಿ ನಮ್ಮ ಹಕ್ಕು' ಹೆಸರಿನ ಪಾದಯಾತ್ರೆಗೆ ಬಿಜೆಪಿ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ನಿಲ್ಲಿಸಲ್ಲ ಎಂದು ಅಶೋಕ್ ಗುಡುಗಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.