ಉದ್ಯೋಗವಕಾಶ: ನ.23ಕ್ಕೆ ಸಂದರ್ಶನ

Mangaluru: ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ, ವಿವಿಧ ಹುದ್ದೆಗಳ ಭರ್ತಿಗೆ ನ.23 ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.

Nov 20, 2026 - 21:42
Nov 20, 2026 - 21:42
ಉದ್ಯೋಗವಕಾಶ: ನ.23ಕ್ಕೆ ಸಂದರ್ಶನ

ಮಂಗಳೂರು: ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ, ನಗರದಲ್ಲಿ ಖಾಲಿಯಿರುವ ಬ್ರಾಂಚ್ ಆಪರೇಷನ್ ಮ್ಯಾನೇಜರ್, ಬ್ಲಾಕ್ ಡೆವಲಪ್‌ಮೆಂಟ್ ಆಫೀಸರ್ ಮತ್ತು ಬಿಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನ.23 ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಜ್ಯೋತಿ ಕೆಎಂಸಿ ಆಸ್ಪತ್ರೆ ಸಮೀಪದ ಸೌಜಾ ಆರ್ಕೇಡ್‌ನಲ್ಲಿರುವ ಸಹಯೋಗ್ ಸೊಸೈಟಿಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ಪಿಯುಸಿ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ಸ್ವವಿವರವುಳ್ಳ ಬಯೋಡೇಟಾದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.