Jos Buttler: ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್

Jos Buttler: ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್, ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅತಿಹೆಚ್ಚು ರನ್ ಗಳಿಸಿದ ಬ್ಯಾಟರ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Aug 6, 2026 - 19:15
Aug 6, 2026 - 19:18
Jos Buttler: ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್

ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ (Jos Buttler), ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅತಿಹೆಚ್ಚು ರನ್ ಗಳಿಸಿದ ಬ್ಯಾಟರ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ದಿ ಹಂಡ್ರೆಡ್ (The Hundred) ಟೂರ್ನಿಯಲ್ಲಿ, ವೆಲ್ಷ್ ಫೈರ್ ವಿರುದ್ಧ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಮೈದಾನಕ್ಕಿಳಿದ ಅವರು, ಬರೀ 20 ಎಸೆತಗಳಲ್ಲಿ ಅಜೇಯ 51 ರನ್ ಬಾರಿಸಿದರು.

ಈ ಮೂಲಕ ಬಟ್ಲರ್ 522 ಟಿ20 ಪಂದ್ಯಗಳಲ್ಲಿ 14,833 ರನ್‌ ಸಿಡಿದ್ದು, ನಂ.1 ಸ್ಥಾನಕ್ಕೇರಿದ್ದಾರೆ. ಇದರಲ್ಲಿ 9  ಶತಕ ಹಾಗೂ 105 ಅರ್ಧಶತಕಗಳು ಸೇರಿವೆ. ಎರಡನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಆಟಗಾರ ಕೀರನ್ ಪೊಲಾರ್ಡ್ ಇದ್ದಾರೆ. 746 ಪಂದ್ಯಗಳನ್ನು ಆಡಿದ್ದು, 14,803 ಹೊಡೆದಿದ್ದರು. 

ಮೂರನೇ ಸ್ಥಾನ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಅವರದ್ದಾಗಿದ್ದು, 463 ಪಂದ್ಯಗಳಿಂದ 14,562 ರನ್ ಬಾರಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.