ಕಬಡ್ಡಿ ಪಂದ್ಯಾವಳಿ: ಶ್ರೀರಾಮಕುಂಜೇಶ್ವರ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Kabaddi Tournament: ಕುಂತೂರುಪದವಿನಲ್ಲಿ ಪ್ರೌಢಶಾಲಾ ಮಟ್ಟದ ಕಬಡ್ಡಿ ಪಂದ್ಯಾವಳಿ ಈಚೆಗೆ ನಡೆಯಿತು. ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡವು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡರೆ, ಬಾಲಕರ ತಂಡವು ರನ್ನರ್‌ಅಪ್ ಆಗಿದೆ.

Sep 2, 2026 - 11:22
ಕಬಡ್ಡಿ ಪಂದ್ಯಾವಳಿ: ಶ್ರೀರಾಮಕುಂಜೇಶ್ವರ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ರಾಮಕುಂಜ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ (ಪುತ್ತೂರು) ಸಹಯೋಗದಲ್ಲಿ ಕುಂತೂರುಪದವಿನಲ್ಲಿ ಪ್ರೌಢಶಾಲಾ ಮಟ್ಟದ ಕಬಡ್ಡಿ ಪಂದ್ಯಾವಳಿ ಈಚೆಗೆ ನಡೆಯಿತು. ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡವು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡರೆ, ಬಾಲಕರ ತಂಡವು ರನ್ನರ್‌ಅಪ್ ಆಗಿದೆ.

ಈ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಶಾಲೆಯ ದೀಕ್ಷಾಶ್ರೀ ಬೆಸ್ಟ್ ಆಲ್‌ರೌಂಡರ್ ಪ್ರಶಸ್ತಿ, ಭುವಿ ಬೆಸ್ಟ್ ಕ್ಯಾಚರ್ ಪ್ರಶಸ್ತಿ ಹಾಗೂ ಬಾಲಕರ ವಿಭಾಗದಲ್ಲಿ ದೀಕ್ಷನ್ ಬೆಸ್ಟ್ ರೈಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಮತ್ತು ಮಂಜುನಾಥ್ ತರಬೇತಿ ನೀಡಿದ್ದರು. ಉಭಯ ತಂಡಗಳು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಗೂ ಆಯ್ಕೆಯಾಗಿವೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ದಾಮ್ಲೆ, ಶಿಕ್ಷಕ ವೃಂದ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಹಂತದಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.