ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್​ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೂ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.

Feb 11, 2026 - 17:43
ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌
Ladle Mashak Dargah Aland

ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಶಿವರಾತ್ರಿಯಂದು ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್‌​ ಪೀಠ ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿ ಅದರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ ಕಲ್ಪಿಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಫೆಬ್ರವರಿ 15ರಂದು ಮಹಾಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಮಾಡಲು 15 ಜನರಿಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ವಿಚಾರನೆ ನಡೆಸಿದ ಕೋರ್ಟ್, ಕೇವಲ ಒಬ್ಬರಿಗೆ ಅದು ದೂರುದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶನ ನೀಡಿ ಆದೇಶಿಸಿದೆ. ಇದರೊಂದಿಗೆ 15 ಜನರಿಗೆ ಅನುಮತಿ ಕೋರಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.