Karavali: ಕರಾವಳಿ ಸಿನಿಮಾದ ಕಲೆಕ್ಷನ್ ಎಷ್ಟಾಗಿದೆ ಗೊತ್ತಾ?

Karavali: ಕನ್ನಡದ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ಕರಾವಳಿ ಬಾಕ್ಸ್ ಆಫೀಸ್‌ನಲ್ಲಿಯೂ ಉತ್ತಮ ಗಳಿಕೆ ಕಾಣುತ್ತಿದೆ.

Jul 27, 2026 - 16:09
Karavali: ಕರಾವಳಿ ಸಿನಿಮಾದ ಕಲೆಕ್ಷನ್ ಎಷ್ಟಾಗಿದೆ ಗೊತ್ತಾ?

ಕನ್ನಡದ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ಕರಾವಳಿ (Karavali) ಜುಲೈ 24 ಶುಕ್ರವಾರದಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆ ಕಂಡಿತ್ತು. ಬಾಕ್ಸ್ ಆಫೀಸ್‌ನಲ್ಲಿಯೂ ಉತ್ತಮ ಗಳಿಕೆ ಕಾಣುತ್ತಿದೆ. 

ಸ್ಯಾಕ್ನಿಲ್ಕ್ ಪ್ರಕಾರ, ಮೂರನೇ ದಿನವಾದ ಭಾನುವಾರ ರೂ.1.64 ಕೋಟಿ ಬಾಚಿದೆ. ಇದರೊಂದಿಗೆ ರೂ.3.88 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ. ಕಂಬಳ ಮತ್ತು ಕರಾವಳಿ ಸಂಸ್ಕೃತಿಯ ಸುತ್ತ ಕಥೆಯನ್ನು ಹೆಣೆಯಲಾಗಿದೆ. ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದ್ದು, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. 

ನಿರ್ದೇಶಕ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳಿದ್ದು, ಅವರದ್ದೇ ಗಾಣಿಗ ಫಿಲ್ಮ್ಸ್ ಬ್ಯಾನರ್‌ನಡಿ ನಿರ್ಮಿಸಲಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಸಾಥ್ ನೀಡಿದೆ. ಸಚಿನ್ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಅಭಿಮನ್ಯು ಸದಾನಂದನ್ ಕ್ಯಾಮೆರಾ ವರ್ಕ್ ಮಾಡಿದ್ದಾರೆ.

ಸಂಪದಾ ಹುಲಿವಾನ ಹಾಗೂ ಸುಷ್ಮಿತಾ ನಾಯಕಿಯರಾಗಿದ್ದಾರೆ. ಮಿತ್ರ, ರಮೇಶ್ ಇಂದಿರಾ ಮತ್ತು ಶ್ರೀಧರ್ ಸೇರಿದಂತೆ ಹಲವಾರು ನಟ-ನಟಿಯರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.