Karavali: ಇದೇ ಶುಕ್ರವಾರ 'ಕರಾವಳಿ' ಬಿಡುಗಡೆ

Kannada FIlm: ಕನ್ನಡದ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ಕರಾವಳಿ ಜುಲೈ 24 ಶುಕ್ರವಾರದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Jul 20, 2026 - 14:10
Karavali: ಇದೇ ಶುಕ್ರವಾರ 'ಕರಾವಳಿ' ಬಿಡುಗಡೆ

ಕನ್ನಡದ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ಕರಾವಳಿ (Karavali) ಜುಲೈ 24 ಶುಕ್ರವಾರದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಟ್ರೇಲರ್ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. 

ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಕಂಬಳ & ಕರಾವಳಿ ಸಂಸ್ಕೃತಿಯ ಸುತ್ತ ಕಥೆಯನ್ನು ಹೆಣೆಯಲಾಗಿದೆ. ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ. ಶೆಟ್ಟಿ ಒಟ್ಟಿಗೆ ನಟಿಸಿದ್ದು, 'ಮಹಾವೀರ-ಮಹಾಬಲ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಜುಲೈ 19 ರಂದು (ಭಾನುವಾರ) ಮಂಗಳೂರಿನಲ್ಲಿ ಪ್ರೀಮಿಯರ್ ಶೋ ಹಾಕಲಾಗಿದ್ದು, ಕರಾವಳಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿರ್ದೇಶಕ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳಿದ್ದು, ಸಚಿನ್ ಬಸ್ರೂರು ಸಂಗೀತ ನೀಡಿದ್ದಾರೆ. ಮಿತ್ರ, ರಮೇಶ್ ಇಂದಿರಾ, ಸುಸ್ಮಿತಾ ಭಟ್, ಶ್ರೀಧರ್ ಕೆಎಸ್ ಹಾಗೂ ಗೋವಿಂದೇ ಗೌಡ ಕೂಡ ಅಭಿನಯಿಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.