Mr Jack: ಮಿಸ್ಟರ್ ಜಾಕ್ ಚಿತ್ರದ ಟೀಸರ್ ಬಿಡುಗಡೆ ಆಯ್ತು!
Mr Jack: ಗುರುನಂದನ್ ನಟನೆಯ ರೊಮ್ಯಾಂಟಿಕ್ ಕಾಮಿಡಿ 'ಮಿಸ್ಟರ್ ಜಾಕ್' ಚಿತ್ರದ ಟೀಸರ್ ಬಿಡುಗಡೆಗೊಂಡಿದೆ.
'ಫರ್ಸ್ಟ್ ರ‍್ಯಾಂಕ್ ರಾಜು' ಖ್ಯಾತಿಯ ಗುರುನಂದನ್ (Gurunandan) ನಟನೆಯ ರೊಮ್ಯಾಂಟಿಕ್ ಕಾಮಿಡಿ ಮಿಸ್ಟರ್ ಜಾಕ್ (Mr Jack) ಚಿತ್ರದ ಟೀಸರ್, ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಈ ಸಿನಿಮಾವು ಇದೇ ಅಕ್ಟೋಬರ್ ತಿಂಗಳಲ್ಲಿ ರಾಜ್ಯಾದ್ಯಂತ ತೆರೆಕಾಣಲಿದೆ.
ಈ ಚಿತ್ರದಲ್ಲಿ ನಟ ಗುರುನಂದನ್, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಪಸ್ವಿನಿ ಪೂಣಚ್ಚ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.
'ಮಂಡಿಮನೆ ಟಾಕೀಸ್' ಬ್ಯಾನರ್‌ನಡಿ ನಿರ್ಮಾಣಗೊಂಡಿದ್ದು, ಸುಮಂತ್ ಗೌಡ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದ ಮುಹೂರ್ತಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್, ಕ್ಲ್ಯಾಪ್ ಮಾಡಿದ್ದರು. ಕಿರಣ್ ರವೀಂದ್ರನಾಥ್ ಮ್ಯುಸಿಕ್ ನೀಡಿದ್ದು, ಶಿವಸೇನ ಕ್ಯಾಮೆರಾ ವರ್ಕ್ ಮಾಡಿದ್ದಾರೆ.
ಮಿತ್ರ, ಧರ್ಮಣ್ಣ ಕಡೂರು, ಗೋಪಾಲಕೃಷ್ಣ ದೇಶಪಾಂಡೆ, ಗಿರಿ ಹಾಗೂ ಸುಷ್ಮಿತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.