Toss: ಸೆ.18ಕ್ಕೆ 'ಟಾಸ್' ಚಿತ್ರ ಕನ್ನಡ-ತುಳು ಭಾಷೆಯಲ್ಲಿ ಬಿಡುಗಡೆ

Toss: ಟಾಸ್ ಸಿನಿಮಾವು ಕನ್ನಡ ಮತ್ತು ತುಳು ಭಾಷೆಯಲ್ಲಿ ಸೆ.18 ಶುಕ್ರವಾರದಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ.

Sep 16, 2026 - 13:08
Toss: ಸೆ.18ಕ್ಕೆ 'ಟಾಸ್' ಚಿತ್ರ ಕನ್ನಡ-ತುಳು ಭಾಷೆಯಲ್ಲಿ ಬಿಡುಗಡೆ

Toss: ಅರ್ಜುನ್ ದೇವ್ ನಟಿಸಿ, ಆಕ್ಷನ್ ಕಟ್ ಹೇಳಿರುವ 'ಟಾಸ್' ಸಿನಿಮಾವು ಕನ್ನಡ ಮತ್ತು ತುಳು ಭಾಷೆಯಲ್ಲಿ ಸೆ.18 ಶುಕ್ರವಾರದಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ನ್ನು ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆಗೊಳಿಸಿದ್ದರು. 

ಕರಾವಳಿಯ ರಂಗಭೂಮಿ & ಸಿನಿರಂಗದ ದೈತ್ಯ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಡಾ.ದೇವದಾಸ್ ಕಾಪಿಕಾಡ್, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಇದು ಆಕ್ಷನ್-ಕಾಮಿಡಿ ಥ್ರಿಲ್ಲರ್ ಎಲಿಮೆಂಟ್ಸ್ ಹೊಂದಿದೆ.  

ಸಾಗರ್ ಪೂಜಾರಿ ನಿರ್ಮಾಣ ಮಾಡಿದ್ದಾರೆ. ಮಣಿಕಾಂತ್ ಕದ್ರಿ ಮ್ಯೂಸಿಕ್ ನೀಡಿದ್ದಾರೆ. ಜೋಯೆಲ್ ಶಮನ್ ಡಿಸೋಜ ಕ್ಯಾಮೆರಾ ವರ್ಕ್ ಮಾಡಿದ್ದು, ಮಂಗಳೂರು ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ಶೂಟಿಂಗ್ ಮಾಡಲಾಗಿದೆ.

ಸುತೇಜ್ ಶೆಟ್ಟಿ, ಕೃತಿ ಶೆಟ್ಟಿ, ಬಾಲಾಜಿ ಮನೋಹರ್, ಭೋಜ್ ರಾಜ್ ವಾಮಂಜೂರು, ಪ್ರಕಾಶ್ ತುಮಿನಾಡು, ದೀಪಕ್ ರೈ ಪಣಾಜೆ ಹಾಗೂ ಗರುಡ ರಾಮ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.