Anant Nag: ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ' ಗೌರವ
Anant Nag: ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ.
ಬೆಂಗಳೂರು: ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಗಾಗಿ, ಕನ್ನಡದ ಹಿರಿಯ ನಟ ಅನಂತ್ ನಾಗ್ (Anant Nag) ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ.
'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ' ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಕೇಂದ್ರ ಸರ್ಕಾರವು ಈ ಪ್ರಶಸ್ತಿಯನ್ನು ಘೋಷಿಸಿದೆ. 78 ವರ್ಷದ ಅನಂತ್ ನಾಗ್ ಅವರು, 5 ದಶಕಗಳ ಸಿನಿ ಪಯಣದಲ್ಲಿ 250ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
ಸೆ.4, 1948 ರಲ್ಲಿ ಅನಂತ್ ನಾಗ್ ಅವರು ಉತ್ತರ ಕನ್ನಡದ ಜಿಲ್ಲೆಯ ಶಿರಳ್ಳಿ ಎಂಬಲ್ಲಿ ಜನಿಸಿದ್ದು, 1973ರಲ್ಲಿ 'ಸಂಕಲ್ಪ' ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪದಾರ್ಪಣೆ ಮಾಡಿದ್ದರು.
ಈ ಬಗ್ಗೆ 'ಎಕ್ಸ್'ನಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಪೋಸ್ಟ್ ಮಾಡಿದ್ದು, ಅನಂತ್ ನಾಗ್ ಅವರಿಗೆ ಅಭಿನಂದನೆ ಸಲ್ಲಿದ್ದಾರೆ. 'ದಶಕಗಳಿಂದ ಅವರ ಸಹಜ ಅಭಿನಯ, ಅದ್ಭುತ ಬಹುಮುಖಿ ಪ್ರತಿಭೆ ಹಾಗೂ ಚಾತುರ್ಯವು ಭಾರತೀಯ ಚಿತ್ರರಂಗ, ಅದರಲ್ಲೂ ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ನಿಜಕ್ಕೂ ಒಬ್ಬ ಶ್ರೇಷ್ಠ ಕಲಾವಿದನಿಗೆ ಸಂದ ಅತ್ಯಂತ ಸೂಕ್ತವಾದ ಗೌರವವಿದು' ಎಂದು ಹೇಳಿದ್ದಾರೆ.
ಇದೇ ಸೆ.22 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 2025 ರಲ್ಲಿ ಪದ್ಮಭೂಷಣ ಪ್ರಶಸ್ತಿಗೂ ಭಾಜನರಾಗಿದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.