ಕರಾಟೆ ಚಾಂಪಿಯನ್: ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿನಿ ನಿಶ್ವಿತಾಗೆ ಬೆಳ್ಳಿ

Karate Champion: ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ, ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿ ನಿಶ್ವಿತಾ ಗಮನಾರ್ಹ ಸಾಧನೆ ಮಾಡಿದ್ದಾರೆ.

Sep 12, 2026 - 15:36
ಕರಾಟೆ ಚಾಂಪಿಯನ್: ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿನಿ ನಿಶ್ವಿತಾಗೆ ಬೆಳ್ಳಿ

ಪುತ್ತೂರು: ಉಡುಪಿಯ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಮಂಗಳೂರು ವಿವಿ ಅಂತರಕಾಲೇಜು ಪುರುಷ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ, ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿ ನಿಶ್ವಿತಾ ಗಮನಾರ್ಹ ಸಾಧನೆ ಮಾಡಿದ್ದಾರೆ.

ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ನಿಶ್ವಿತಾ ಅವರು, ಮಹಿಳೆಯರ 68 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ.

ನಿಶ್ವಿತಾರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಡಾ.ಆಂಟನಿ ಪ್ರಕಾಶ್ ಮೊಂತೆರೊ ಅಭಿನಂದನೆ ಸಲ್ಲಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.